ಕಾಪು: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಗುರುವಾರ ಮುಸ್ಲಿಂ ಸಮುದಾಯದವರು ರಾಜ್ಯದಾದ್ಯಂತ ಬಂದ್ ಆಚರಣೆ ಮಾಡಿದ ಬೆನ್ನಲ್ಲೆ ಇತಿಹಾಸ ಪ್ರಸಿದ್ದ ಕಾಪು ಮಾರಿ ಪೂಜೆಯಲ್ಲಿ ಯಾವುದೇ ಮುಸ್ಲಿಂ ಸಮುದಾಯದವರಿಗೆ ಅಂಗಡಿ ನಡೆಸಲು ಅವಕಾಶ ನೀಡದಂತೆ ಕೋರಿ ಕಾಪು ಪುರಸಭೆಯ ಮುಖ್ಯಾಧಿಕಾರಿಗೆ ಹಾಗೂ ಕಾಪುವಿನ ಮೂರು ಮಾರಿಗುಡಿಯ ಆಡಳಿತ ಮಂಡಳಿಗೆ ಪತ್ರ ಮುಖೇನ ಮನವಿ ಮಾಡಲಾಗಿದೆ.
ಕಾಪು ಹಿಂದೂ ಕಾರ್ಯಕರ್ತರು ಎಂಬ ವಿಳಾಸದಲ್ಲಿಕಾಪು ಪುರಸಭೆ ವ್ಯಾಪ್ತಿಯಲ್ಲಿ ಬರುವ ಪಡು ಗ್ರಾಮದ ಮೂರು ಮಾರಿಗುಡಿಗಳಲ್ಲಿ ದಿನಾಂಕ: 22-03-2022 ಮತ್ತು 23-03-2022 ರಂದು ನಡೆಯುವ ಮಾರಿಪೂಜೆಯಲ್ಲಿ ಯಾವುದೇ ಮುಸ್ಲಿಂ ಸಮುದಾಯದವರಿಗೆ ಅಂಗಡಿ/ಸ್ಟಾಲ್‌ಗಳನ್ನು ನಡೆಸಲು ಅವಕಾಶ ಕೊಡಬಾರದು ಒಂದು ವೇಳೆ ಮುಸ್ಲಿಂ ಸಮುದಾಯದವರಿಗೆ ಅಂಗಡಿ/ಸ್ಟಾಲ್‌ಗಳನ್ನು ನಡೆಸಲು ಅವಕಾಶಕೊಟ್ಟರೆ ಅದರಿಂದ ಉಂಟಾಗುವ ಯಾವುದೇ ತೊಂದರೆ ಅಥವಾ ಅನಾಹುತಗಳಿಗೆ ನೀವೆ ಜವಾಬ್ದಾರರು. ಆದುದರಿಂದ ತಾವು ಮುಸ್ಲಿಂ ಸಮುದಾಯದವರಿಗೆ ಅಂಗಡಿ ನಡೆಸಲು ಅವಕಾಶ ಕೊಡಬಾರದದೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…