ಕಾಪು: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ವಿಳಂಬ ನೀತಿ ಅನುಸರಿಸುವಿಕೆ, ಭವಿಷ್ಯದಲ್ಲಿ ಸರತ್ಕಲ್ ಟೋಲ್‌ನ್ನು ಹೆಜಮಾಡಿ ಟೋಲ್‌ಗೇಟ್‌ನ ಜೊತೆಗೆ ವಿಲೀನಗೊಳಿಸಿ ದರ ಏರಿಸುವ ಸಾಧ್ಯತೆಯನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನ.12ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಕಾಪು ಪೇಟೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ.
ಸುರತ್ಕಲ್‌ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್‌ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಈಗಾಗಲೇ ಪ್ರತಿಭಟನೆ ನಡೆಸಲಾಗಿದ್ದು ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಟೋಲ್ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರೂ ಇನ್ನೂ ತೆರವಾಗಿಲ್ಲ. ಮುಂದೆ ಸುರತ್ಕಲ್ ಟೋಲ್ ಹೆಜಮಾಡಿ ಟೋಲ್ ಜತೆ ವಿಲೀನ ಗೊಂಡರೆ ಅದರಿಂದ ವಾಹನ ಸವಾರರಿಗೆ ತೀವ್ರ ಬರೆ ಬೀಳಲಿದೆ. ಹೆಜಮಾಡಿ ಟೋಲ್‌ನ ಸುತ್ತಮುತ್ತಲಿನ ವ್ಯಾಪ್ತಿಗೆ ಬರುವ 5-7 ಕಿ.ಮೀ. ವ್ಯಾಪ್ತಿಯ ಜನರಿಗೆ ಉಚಿತ ಪಾಸ್ ನೀಡುವ ಬಗ್ಗೆ ನೀಡಿರುವ ಮನವಿಗೂ ಯಾವುದೇ ಪುರಸ್ಕಾರ ದೊರಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನಾ ಧರಣೆ ನಡೆಸಲು ಉದ್ದೇಶಿಸಿದೆ.
ಸಾರ್ವಜನಿಕರು ಮತ್ತು ವಾಹನ ಸವಾರರ ಪರವಾಗಿ ನಡೆಯುವ ಪ್ರತಿಭಟನಾ ಸಭೆಯಲ್ಲಿ ಕಾಪು ಕ್ಷೇತ್ರದ ನಾಗರಿಕರು, ಪಕ್ಷದ ಪದಾಽಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಮನವಿ ಮಾಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…