Featured

ಕಾಪು:  ಸುರತ್ಕಲ್ ಟೋಲ್ ತೆರವು ವಿಳಂಬ ನೀತಿ ಖಂಡಿಸಿ ನಾಳೆ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ -Vishwanews24

ಕಾಪು:  ಸುರತ್ಕಲ್ ಟೋಲ್ ತೆರವು ವಿಳಂಬ ನೀತಿ ಖಂಡಿಸಿ ನಾಳೆ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕಾಪು: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ವಿಳಂಬ ನೀತಿ ಅನುಸರಿಸುವಿಕೆ, ಭವಿಷ್ಯದಲ್ಲಿ ಸರತ್ಕಲ್ ಟೋಲ್‌ನ್ನು ಹೆಜಮಾಡಿ ಟೋಲ್‌ಗೇಟ್‌ನ ಜೊತೆಗೆ ವಿಲೀನಗೊಳಿಸಿ ದರ ಏರಿಸುವ ಸಾಧ್ಯತೆಯನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನ.12ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಕಾಪು ಪೇಟೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ.

ಸುರತ್ಕಲ್‌ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್‌ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಈಗಾಗಲೇ ಪ್ರತಿಭಟನೆ ನಡೆಸಲಾಗಿದ್ದು ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಟೋಲ್ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರೂ ಇನ್ನೂ ತೆರವಾಗಿಲ್ಲ. ಮುಂದೆ ಸುರತ್ಕಲ್ ಟೋಲ್ ಹೆಜಮಾಡಿ ಟೋಲ್ ಜತೆ ವಿಲೀನ ಗೊಂಡರೆ ಅದರಿಂದ ವಾಹನ ಸವಾರರಿಗೆ ತೀವ್ರ ಬರೆ ಬೀಳಲಿದೆ. ಹೆಜಮಾಡಿ ಟೋಲ್‌ನ ಸುತ್ತಮುತ್ತಲಿನ ವ್ಯಾಪ್ತಿಗೆ ಬರುವ 5-7 ಕಿ.ಮೀ. ವ್ಯಾಪ್ತಿಯ ಜನರಿಗೆ ಉಚಿತ ಪಾಸ್ ನೀಡುವ ಬಗ್ಗೆ ನೀಡಿರುವ ಮನವಿಗೂ ಯಾವುದೇ ಪುರಸ್ಕಾರ ದೊರಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನಾ ಧರಣೆ ನಡೆಸಲು ಉದ್ದೇಶಿಸಿದೆ.

ಸಾರ್ವಜನಿಕರು ಮತ್ತು ವಾಹನ ಸವಾರರ ಪರವಾಗಿ ನಡೆಯುವ ಪ್ರತಿಭಟನಾ ಸಭೆಯಲ್ಲಿ ಕಾಪು ಕ್ಷೇತ್ರದ ನಾಗರಿಕರು, ಪಕ್ಷದ ಪದಾಽಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಮನವಿ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago