Featured

ಕಾಪು ಸುರೇಶ್ ಶೆಟ್ಟಿ ಗುರ್ಮೆ ಅವರಿಗೆ ಬಿಜೆಪಿ ಟಿಕೆಟ್ ಫೈನಲ್ – VishwaNews24

ಕಾಪು ಸುರೇಶ್ ಶೆಟ್ಟಿ ಗುರ್ಮೆ ಅವರಿಗೆ ಬಿಜೆಪಿ ಟಿಕೆಟ್ ಫೈನಲ್

ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಒಬಿಸಿ –32, ಎಸ್‌ಸಿ –30, ಎಸ್‌ಟಿ– 16 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದರು.

ಶಿಕಾರಿಪುರದಿಂದ ವಿಜಯೇಂದ್ರ, ಗೋಕಾಕ್‌ನಿಂದ ರಮೇಶ್ ಜಾರಕಿಹೊಳಿ, ಅರಭಾವಿಯಿಂದ ಬಾಲಚಂದ್ರ ಜಾರಕಿಹೊಳಿ, ಮುಧೋಳ – ಗೋವಿಂದ ಕಾರಜೋಳ,‌ ಕುಡಿಚಿಯಿಂದ ರಾಜೀವ್, ನಿಪ್ಪಾಣಿಯಿಂದ ಶಶಿಕಲಾ ಜೊಲ್ಲೆ, ಬೀಳಗಿಯಿಂದ ಮುರುಗೇಶ್ ನಿರಾಣಿ, ವಿಜಯಪುರದಿಂದ ಬಸನಗೌಡ ಪಾಟೀಲ ಯತ್ನಾಳ, ಕಿತ್ತೂರಿನಿಂದ ಮಹಾಂತೇಶ್ ದೊಡಗೌಡರ್​, ಬೈಲಹೊಂಗಲದಿಂದ ಜಗದೀಶ್ ಮೆಟಗುಡ್ಡ, ಸವದತ್ತಿಯಿಂದ ರತ್ನಾ ಮಾಮನಿ, ರಾಮದುರ್ಗದಿಂದ ಚಿಕ್ಕರೇವಣ್ಣ ಕಣಕ್ಕಿಳಿಯಲಿದ್ದಾರೆ.

ಬೆಳಗಾವಿ ಉತ್ತರ – ರವಿ ಪಾಟೀಲ, ಬೆಳಗಾವಿ ದಕ್ಷಿಣ – ಅಭಯ್, ಬೆಳಗಾವಿ ಗ್ರಾಮಾಂತರ – ನಾಗೇಶ್, ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್, ಬೈಲಹೊಂಗಲ – ಜಗದೀಶ್ ಮೆಟಗೊಡ್, ವಿಜಯನಗರ – ಸಿದ್ದಾರ್ಥ್ ಸಿಂಗ್​, ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು, ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ, ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ, ಉಡುಪಿ – ಯಶ್​ಪಾಲ್​​ ಸುವರ್ಣ, ಕಾರ್ಕಳ – ವಿ.ಸುನೀಲ್ ಕುಮಾರ್​, ಚಿಕ್ಕಮಗಳೂರು – ಸಿ.ಟಿ.ರವಿ, ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ, ತಿಪಟೂರು – ಬಿ.ಸಿ.ನಾಗೇಶ್, ತುಮಕೂರು – ಜ್ಯೋತಿ ಗಣೇಶ್, ಕೊರಟಗೆರೆ – ಅನಿಲ್ ಕುಮಾರ್ (ನಿವೃತ್ತ ಐಎಎಸ್ ಅಧಿಕಾರಿ) ಕಣಕ್ಕಿಳಿಯಲಿದ್ದಾರೆ.

ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಹೇಳಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

22 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

22 hours ago