Featured

ಕಾಪು  : ಸೆ.7ರಂದು ಕೊಪ್ಪಲಂಗಡಿಯಲ್ಲಿ ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ ಉದ್ಘಾಟನೆ – vishwanews24

ಕಾಪು  : ಸೆ.7 ರಂದು ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ ಉದ್ಘಾಟನೆ

ಉಡುಪಿ : ಕಾಪು ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲೇ ನೂತನವಾಗಿ ನಿರ್ಮಾಣಗೊಂಡಿರುವ ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳಿಂದ ಕೂಡಿದ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ’ ಸೆ.7 ರಂದು ಬೆಳಗ್ಗೆ 11.30ಕ್ಕೆ ಉದ್ಘಾಟನೆಗೊಳ್ಳಲಿದೆ.

ಈ ಸಭಾಂಗಣದ ಮುಖ್ಯ ಹಾಲ್‌ನಲ್ಲಿ 1,500 ಮಂದಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಇನ್ನೂ 1,500 ಮಂದಿಗೆ ಮಹಿಳೆಯರಿಗಾಗಿ ಪ್ರತ್ಯೇಕ ಬಾಲ್ಕನಿ ವ್ಯವಸ್ಥೆ ಮಾಡಲಾಗಿದೆ. ಇದು ಈ ಸಭಾಂಗಣದ ವೈಶಿಷ್ಟ್ಯವಾಗಿದೆ. 4,000 ಚದರ ಅಡಿ ವಿಸ್ತೀರ್ಣದ ಭವ್ಯವಾದ ಪ್ರವೇಶ ದ್ವಾರ, ಆತ್ಮೀಯ ಕೂಟಗಳಿಗೆ ಅನುಕೂಲವಾಗುವ ರೀತಿಯ 300 ಮಂದಿಗೆ ಕುಳಿತುಕೊಳ್ಳಲು ಸಾಮರ್ಥ್ಯ ಇರುವ ಮಿನಿ ಹಾಲ್, ಚರ್ಚೆಗಳಿಗೆ ಅನುಕೂಲವಾದ ಕಾನ್ಸರೆನ್ಸ್ ರೂಂಗಳು ಕೂಡ ಇವೆ.

ಒಟ್ಟು 30,000 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಎರಡು ಭೋಜನ ಭವನಗಳು, ಪೂರ್ಣಸಜ್ಜಿತ ಅಡುಗೆ ಮನೆಗಳು, ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ನಮಾಜ್ ಕೊಠಡಿಗಳು, ಹೈ-ಕ್ಯಾಪಾಸಿಟಿ ಲಿಫ್ಟ್‌ಗಳು ಹಾಗೂ 250 ವಾಹನಗಳಿಗೆ ಅನುಕೂಲವಾಗುವ ಪಾರ್ಕಿಂಗ್ ವ್ಯವಸ್ಥೆಗಳನ್ನು ಈ ಸಭಾಂಗಣ ಒಳಗೊಂಡಿದೆ.

ಈ ಸೌಲಭ್ಯಗಳು ಇಂದಿನ ಅಗತ್ಯಗಳನ್ನು ಮಾತ್ರವಲ್ಲ, ಮುಂದಿನ ತಲೆಮಾರುಗಳಿಗೂ ಸೇವೆ ಮಾಡಲು ನಿರ್ಮಿಸ ಲಾಗಿದೆ. ಮುಂದೆ ಇನ್ನಷ್ಟು ಸೌಲಭ್ಯಗಳನ್ನು – ಮುಕ್ತಾಂಗಣ, ಈಜುಕೊಳ ಮತ್ತು ವಸತಿ ಕೊಠಡಿ ವ್ಯವಸ್ಥೆ ಅಭಿವೃದ್ಧಿ ಪಡಿಸುವ ಯೋಜನೆ ಕೂಡ ಇದೆ ಎಂದು ಇನಾಸನ್ ಆಡಿಟೋರಿಯಂ ಅಧ್ಯಕ್ಷ ಮುಹಮ್ಮದ್ ಸಾದಿಕ್ ತಿಳಿಸಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರಾದ ಅಸ್ಲಂ ಕಾಜಿ, ಅಬ್ದುಲ್ ಜಲೀಲ್, ಮುಸ್ತಫಾ ಅಸಾದಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಆಸಿಫ್ ಕೋಟೇಶ್ವರ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಭಾಗವಹಿಸಲಿರು ವರು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶುಭ ಹಾರೈಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

16 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

17 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

18 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

18 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

19 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

19 hours ago