ಕಾಪು : ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಚ್ಚಿಲದ ಎಸ್‌ಡಿಪಿಐ ಆಂಬುಲೆನ್ಸ್ ನಲ್ಲಿ ಕೆಎಂ ಸಿರಾಜ್, ಜಲಾಲುದ್ದೀನ್ ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…