ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತಪಟ್ಟ ಸವಾರ. ಮತ್ತೋರ್ವ ಸವಾರ ನಿಹಾಲ್ ವಿಲ್ಸನ್ ತೀವ್ರಗಾಯಗೊಂಡಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ದೂರುದಾರ ರಿತೇಶ್ ಶೆಟ್ಟಿ ಎಂಬವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಸ್ಕೂಟಿ ಸಮೇತ ಕೆಳಗೆ ಬಿದ್ದು ತೀವ್ರ ಗಾಯಗೊಂಡು ನರಳಾಡುತ್ತಿದ್ದ ಪ್ರತೀಶ್ ಮತ್ತು ನಿಹಾಲ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಪ್ರತೀಶ್ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮೃತ ಯುವಕ ಪ್ರತೀಶ್ ಪ್ರಸಾದ್ ಕಾಪುವಿನ ಹಿರಿಯ ಛಾಯಾಗ್ರಾಹಕ ಭಕ್ತಪ್ರಸಾದ್ ಮತ್ತು ಉಷಾ ಭಕ್ತಪ್ರಸಾದ್ ದಂಪತಿಯ ಸುಪುತ್ರ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…