ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಜೂ.18ರ ಗುರುವಾರ ಬೆಳಿಗ್ಗೆ ನಡೆದಿದೆ.
ಕಾಪು ಸರ್ವಿಸ್ ರಸ್ತೆಯಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವ ಎಕ್ಸ್ ಪ್ರೆಸ್ ಬಸ್ ಎದುರಿನಿಂದ ಹೆದ್ದಾರಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿರುವ ಸ್ಕೂಟಿ ಸವಾರನನ್ನು ಮಂಗಳೂರು ಸಸಿಹಿತ್ತು ನಿವಾಸಿ, ಪ್ರಸ್ತುತ ಕಾಪುವಿನಲ್ಲಿರುವ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದೆ.
ಗಾಯಾಳು ಸ್ಕೂಟಿ ಸವಾರನನ್ನು ಸ್ಥಳೀಯರು ಆಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಸ್ಕೂಟಿಗೆ ಡಿಕ್ಕಿ ಹೊಡೆದ ಬಸ್ ಡಿವೈಡರ್ ಮೇಲೆ ಹೋಗಿ ನಿಂತಿದ್ದು ಬಾರಿ ಪ್ರಮಾಣದ ಅಪಾಯ ತಪ್ಪಿದಂತಾಗಿದೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…