ಕಾಪು: ಸ್ಕೂಟಿ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.
ಬೈಕ್ ಸವಾರ ಅದಮಾರು ಕಾಲೇಜ್ ಬಳಿಯ ನಿವಾಸಿ ಸೂರಜ್ (23) ಮೃತಪಟ್ಟು ಸಹಸವಾರ ಅಧೀಶ್ ಮತ್ತು ಸ್ಕೂಟಿ ಸವಾರ ಕೊಪ್ಪಲಂಗಡಿ ನಿವಾಸಿ ಉಮೇಶ್ ಗಾಯಗೊಂಡವರು.
ಮೃತ ಸೂರಜ್ ಪಡುಬಿದ್ರಿ ಸುಜ್ಞಾನ್ ಕಂಪೆನಿಯ ಸೂಪರ್ ವೈಸರ್ ಆಗಿದ್ದು ರಾತ್ರಿ ಕಟಪಾಡಿಗೆ ತೆರಳಿ, ಅಲ್ಲಿಂದ ಅದಮಾರಿನ ತನ್ನ ಮನೆಗೆ ಆಗಮಿಸುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸ್ಕೂಟಿ ಸವಾರ ಉಮೇಶ್ ಮತ್ತು ಬೈಕ್ ಸವಾರ ಸೂರಜ್ ಗಂಭೀರ ಗಾಯಗೊಂಡಿದ್ದು, ಸಹಸವಾರ ಆದೀಶ್ ಸಣ್ಣ ಪುಟ್ಟ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರ ಸೂಚನೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಸೂರಜ್ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದು ಅದರಂತೆ ವಾಪಸ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…