Featured

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ : ಸವಾರ ಸಾವು – vishwanews24

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ : ಸವಾರ ಸಾವು

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‌ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.

ಬೈಕ್‌ ಸವಾರ ಅದಮಾರು ಕಾಲೇಜ್ ಬಳಿಯ ನಿವಾಸಿ ಸೂರಜ್ (23) ಮೃತಪಟ್ಟು ಸಹಸವಾರ ಅಧೀಶ್ ಮತ್ತು ಸ್ಕೂಟಿ ಸವಾರ ಕೊಪ್ಪಲಂಗಡಿ ನಿವಾಸಿ ಉಮೇಶ್ ಗಾಯಗೊಂಡವರು.

ಮೃತ ಸೂರಜ್ ಪಡುಬಿದ್ರಿ ಸುಜ್ಞಾನ್ ಕಂಪೆನಿಯ ಸೂಪರ್ ವೈಸರ್ ಆಗಿದ್ದು ರಾತ್ರಿ ಕಟಪಾಡಿಗೆ ತೆರಳಿ, ಅಲ್ಲಿಂದ ಅದಮಾರಿನ ತನ್ನ ಮನೆಗೆ ಆಗಮಿಸುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸ್ಕೂಟಿ ಸವಾರ ಉಮೇಶ್ ಮತ್ತು ಬೈಕ್ ಸವಾರ ಸೂರಜ್ ಗಂಭೀರ ಗಾಯಗೊಂಡಿದ್ದು, ಸಹಸವಾರ ಆದೀಶ್ ಸಣ್ಣ ಪುಟ್ಟ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರ ಸೂಚನೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಸೂರಜ್ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದು ಅದರಂತೆ ವಾಪಸ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago