ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ.
ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ಮರುದಿನ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಆದ್ರೆ, ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಖಾಸಗಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ತಂದೆಯೊಂದಿಗೆ ಬಂದಿದ್ದ ಬಾಲಕಿ ಸಾತ್ವಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…