ಕಾಪು : ಭಾರತದ ಸ್ವಾತಂತ್ರಕ್ಕಾಗಿ ಹೋರಾಡಿದ ಪೂರ್ವಜರಲ್ಲಿದ್ದ ಸ್ವದೇಶಾಭಿಮಾನದ ಕಿಚ್ಚು ಹಾಗು ಶ್ರದ್ದೆಯ ಹೋರಾ ಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರಕಿದೆ. ಅದನ್ನು ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಪ್ರಯತ್ನ ನಮ್ಮಿಂದ ನಡೆಯಬೇಕಿದೆ. ಇನ್ನು ಕೆಲವೇ ವರ್ಷದಲ್ಲಿ ಭಾರತ ವಿಕಸಿತಗೊಳ್ಳಲಿದೆ ಅದಕ್ಕಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ, ಆ ಪ್ರಯುಕ್ತ ನಾವೆಲ್ಲರೂ ದೇಶ ಸೇವೆಗಾಗಿ ಸನ್ನದ್ಧರಾಗಬೇಕು ಮತ್ತು ವಿಶೇಷವಾಗಿ ಮಹಿಳಾ ಸಬಲೀಕರಣವಾಗಬೇಕು ಎಂದು ಕಾಪು ತಹಸೀಲ್ದಾರ್ ಡಾ ಪ್ರತಿಭಾ ಆರ್ ಹೇಳಿದರು.
ಕಾಪು ತಾಲೂಕು ಮಟ್ಟದ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಾಗೂ ತಾಲೂಕು ಆಡಳಿತದ ವತಿಯಿಂದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೇಶದ ಪ್ರಗತಿ ಮತ್ತು ಉನ್ನತಿಗೆ ನಾವೆಲ್ಲರೂ ನಮ್ಮಿಂದ ಸಾಧ್ಯವಾಗುವಷ್ಟು ರೀತಿಯಲ್ಲಿ ಸಹಕರಿಸುವಂತಾಗಬೇಕು. ಇದು ಸ್ವಾತಂತ್ರೋತ್ಸವಕ್ಕೆ ನೀಡುವ ಕೊಡುಗೆಯಾಗಲಿದೆ ಇದು ಕೇವಲ ಒಂದು ದಿನದ ಜಾತ್ರೆಗೆ ಸೀಮಿತವಾಗಬಾರದು ಎಂದರು.
ಸಮ್ಮಾನ, ಗೌರವಾರ್ಪಣೆ : ಎಸ್‌ಎಸ್‌ಎಲ್‌ಸಿಯಲ್ಲಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮ್ಮಾನಿಸಿ, ಗೌರವಿಸಲಾಯಿತು. ಪೊಲೀಸ್, ಗೃಹರಕ್ಷಕದಳ, ಸೇವಾದಳ, ಎನ್ ಸಿಸಿ ವಿದ್ಯಾರ್ಥಿಗಳಿಂದ ಧ್ವಜ ವಂದನೆ ನಡೆಯಿತು.
ಕಾಪು ಪುರಸಭೆ ಮುಖ್ಯಾಧಿಕಾರಿ ನಾಗರಾಜ., ಕಾಪು ಪೊಲೀಸ್ ವೃತ್ತ ನಿರೀಕ್ಷಕ ಜಯಶ್ರೀ ಮಾಣೆ, ತಾಲೂಕು ಯುವಜನ ಕ್ರೀಡಾ ಅಧಿಕಾರ ರೀತೆಶ್ ಸೂಡ,ತಾಲೂಕು ಪಂಚಾಯತ್ ಇ.ಓ ಜೇಮ್ಸ್ ಡಿಸಿಲ್ವಾ, , ಕಾಪು ಎಸ್ಸೆ ಅಬ್ದುಲ್ ಖಾದರ್,, ಕಾಪು ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ನಾಗೇಶ್, ಶೈಲೇಶ್ ಅಮೀನ್, ಸತೀಶ್ ಚಂದ್ರ ಮೂಳೂರು, ಶಾಂತಲತ ಶೆಟ್ಟಿ, ಶೋಭ ಬಂಗೇರ,ಫರ್ಜಾನ,ಜ್ಯೂಲಿಯೇಟ್ಉಮೇಶ್ ಕರ್ಕೇರಾ, ಅಮೀರ್ ಮಹಮ್ಮದ್, ಸರಿತಾ,ಹರಿಣಾಕ್ಷಿ,ಮಹಮ್ಮದ್ ಆಸೀಫ್ ಇದ್ದರು.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಎಂ. ಗಾಂವ್ಕರ್ ಸ್ವಾಗತಿಸಿದರು, ಉಪನ್ಯಾಸಕಿ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…