Featured

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ :vishwanews24

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ :vishwanews24

ಕಾಪು : ಶ್ರೀಹಳೇ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಮಹಾ ಸಂಕಲ್ಪ ಪೂರ್ವಭಾವಿಯಾಗಿ ಸಮಗ್ರ ಜೀರ್ಣೋದ್ಧಾರ ಮಹಾಸಂಕಲ್ಪ- ಮೂಲನಿಧಿ ಸಮರ್ಪಣಾ ಮಹಾ ಅಭಿಯಾನದ ಕಾರ್ಯಕ್ರಮ ಮಂಗಳವಾರ ದೇಗುಲದ ವಠಾರದಲ್ಲಿ ನಡೆಯಿತು.

ಲಕ್ಷಾಂತರ ಭಕ್ತರ ಬಹು ಕಾಲದ ಕನಸಾದ ಹಳೇ ಮಾರಿಯಮ್ಮ ಸನ್ನಿಧಾನದ ಜೀರ್ಣೋದ್ದಾರ ಮತ್ತು ಸುತ್ತುಪೌಳಿ ಪುನರ್ ನಿರ್ಮಾಣ ಉದ್ದೇಶದೊಂದಿಗೆ ಶ್ರೀ ಕಾಶೀ ಮಠಾಧಿಶರಾದ ಶ್ರೀ ಸಂಯ್ಯಮೀಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ 2023ರಲ್ಲಿ ಮುಷ್ಟಿಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಗಿತ್ತು. ಈಗ ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಮಾರಿಯಮ್ಮ ದೇವರ ಸಮಸ್ತ ಭಕ್ತರ ಅಪೇಕ್ಷೆಯಂತೆ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಪೂರ್ವಭಾವಿಯಾಗಿ ಸಮಸ್ತ ಭಕ್ತರಿಗೆ ಕಾಣಿಕೆ ಡಬ್ಬಿ ವಿತರಣೆ, ಜೀರ್ಣೋದ್ದಾರ ಲಾಂಛನ ಅನಾವರಣ ಕಾರ್ಯಕ್ರಮ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಕೆ. ಕಮಲಾಕ್ಷ ಭಟ್, ಮಂಗಳೂರು ವೆಂಕಟರಮಣ ದೇವಸ್ಥಾನದ ತಂತ್ರಿ, ಧಾರ್ಮಿಕ ವಿದ್ವಾಂಸ ಡಾ / ಎಂ. ಪಂಡಿತ್ ನರಸಿಂಹ ಆಚಾರ್ಯ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ಮಾಡಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತಾನಾಡಿ ” 42 ವರ್ಷಗಳ ಹಿಂದೆ ಊರು ಬಿಟ್ಟು ಪರವೂರಿಗೆ ಹೋಗುವ ಸಂಧರ್ಭದಲ್ಲಿ ಕೈಯಲ್ಲಿ ಇದದ್ದು ಹಳೆ ಮಾರಿಯಮ್ಮನ ಗದ್ದಿಗೆ ಪೂಜೆಯ ಪ್ರಸಾದ ಇವತ್ತು ನನ್ನನ್ನು ಈ ಹಂತಕ್ಕೆ ತಂದು ನಿಲ್ಲಿಸಿದೆ ಹಾಗಾಗಿ ತಾಯಿ ಮಾಡಿಸ್ತಾಳೆ ಎಂಬ ನಂಬಿಕೆಯಿಂದ ಹೆಜ್ಜೆ ಇಟ್ಟಾಗ ಉಳಿದೆಲ್ಲವನ್ನು ಅವಳೇ ಮುಂದುವರಿಸಿಕೊಂಡು ಹೋಗುತ್ತಾರೆ ಆದ್ದರಿಂದ ಸಂಕಲ್ಪ ಮಾಡಿದರೆ ಸಿದ್ದಿಯಾಗುವ ಸಮಯ ತುಂಬಾ ದೂರವಿಲ್ಲ ಎಂದರು .

ಮಾಜಿ ಸಚಿವ ವಿನಯ್‌ಕುಮಾ‌ರ್ ಸೊರಕೆ ಮಾತಾನಾಡಿ “ಕಾಪು ಸುಗ್ಗಿ ಮಾರಿಪೂಜೆ ಕಾಪುವಿಗೆ ನಾಡಹಬ್ಬವಾಗಿದೆ,ಜಿಎಸ್ಬಿ ಸಮಾಜ ನೂರಾರು ಕೋಟಿ ರೂಪಾಯಿಯನ್ನು ಶೈಕ್ಷಣಿಕ -ಧಾರ್ಮಿಕ-ವೈದ್ಯಕೀಯ ರಂಗಕ್ಕೆ ನೀಡಿದೆ ಹಾಗಾಗಿ ಇವತ್ತಿನ ಮೂಲಧನ ಸಂಗ್ರಹ ಕೂಡ ಅತ್ಯಂತ ಯಶಸ್ವಿಯಾಗಿ ನಡೆಯುತ್ತೆಂದರು.

ಮಾಜಿ ಆಡಳಿತ ಮೊಕೇಸರ ಶ್ರೀಧರ ಆನಂದ್ರಾಯ ಶೆಣೈ, ಶಾಸಕರಾದ , ಪ್ರತಾಪ್‌ಸಿಂಹ ನಾಯಕ್, ಮಾಜಿ ಶಾಸಕ ಲಾಲಾಜಿ ಆ‌ರ್. ಮೆಂಡನ್, ಜಿಎಸ್‌ಬಿ ಸರ್ವ ದೇವಸ್ಥಾನಗಳ ಒಕ್ಕೂಟದ ಅಧ್ಯಕ್ಷ ಅಜಿತ್ ಕುಡ್ವಾ ಮೂಲ್ಕಿ, ಪ್ರಮುಖರಾದ ಮನೋಹರ್ ಎಸ್. ಶೆಟ್ಟಿ ಕಾಪು, ಕೆ. ವಾಸುದೇವ ಶೆಟ್ಟಿ, ವಿಕ್ರಂ ಕಾಪು, ಮೋಹನ್ ಎಂ. ಬಂಗೇರ, ಲಕ್ಷ್ಮೀನಾರಾಯಣ ನಾಯಕ್ ಕಾಪು, ಡಾ| ಕೆ. ನಾಗಾನಂದ ಭಟ್ ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮೊಕ್ತಸರ ಪ್ರಸಾದ್ ಗೋಕುಲ್‌ದಾಸ್ ಶೆಣೈ ಸ್ವಾಗತಿಸಿ- ಪ್ರಾಸ್ತಾವಿಕ ನುಡಿಗಳನ್ನಾಡಿದರು, ಡಾ ಸದಾನಂದ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago