ಕಾಪು : ಇಲ್ಲಿನ ಹೆಜಮಾಡಿ ಬಂದರು ಅಭಿವೃದ್ಧಿಗೆ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 181 ಕೋಟಿ ಹಾಗೂ ಭೂ ಸ್ವಾಧೀನಕ್ಕೆ 7 ಕೋಟಿ ಸೇರಿದಂತೆ ಒಟ್ಟು 188 ಕೋಟಿ ರೂಪಾಯಿ ಅನುದಾನ ಮಂಜೂರಾಗಿ 60 ಶೇಖಡಾ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಬಾಕಿ ಇರುವ ಅನುದಾನದ ಬಿಡುಗಡೆಯ ಬಗ್ಗೆ ಮೀನುಗಾರಿಕಾ ಸಚಿವರಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ, ಉಪಾಧ್ಯಕ್ಷ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು, ಜಗನ್ನಾಥ್, ನಳಿನಿ, ಸುಜಾತ, ಬಬಿತಾ, ಹೆಜಮಾಡಿ ಮೀನುಗಾರಿಕಾ ಬಂದರು ಸಮಿತಿಯ ಅಧ್ಯಕ್ಷ ಸದಾಶಿವ ಕೋಟ್ಯಾನ್, ಉಪಾಧ್ಯಕ್ಷ ರವಿ ಕುಂದರ್, ಪ್ರಧಾನ ಕಾರ್ಯದರ್ಶಿ ವಿಜಯ ಬಂಗೇರ, ಮೀನುಗಾರ ಮುಖಂಡರಾದ ಹರೀಶ್ ಚಂದ್ರ ಮೆಂಡನ್, ನಾರಾಯಣ ಮೆಂಡನ್, ದಿವಾಕರ ಮೆಂಡನ್ ಮತ್ತು ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್ ಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಉದಯ್ ಕುಮಾರ್, ಸಹಾಯಕ ಅಭಿಯಂತರ ಜಯರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…