ಕಾಪು : ಹೆಸರಿಗಾಗಿ ಮಾಡುವ ಕೆಲಸಕ್ಕಿಂತ, ಸಮಾಜದ ಅಭ್ಯುದಯಕ್ಕಾಗಿ ಮಾಡುವ ಕೆಲಸಕ್ಕೆ ಹೆಚ್ಚಿನ ಪುಣ್ಯ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ -vishwanews24
ಕಾಪು : ಹೆಸರಿಗಾಗಿ ಮಾಡುವ ಕೆಲಸಕ್ಕಿಂತ, ಸಮಾಜದ ಅಭ್ಯುದಯಕ್ಕಾಗಿ ಮಾಡುವ ಕೆಲಸಕ್ಕೆ ಹೆಚ್ಚಿನ ಪುಣ್ಯ ..
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿಕೆ
ಕಾಪು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ನೇತೃತ್ವದಲ್ಲಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುರ್ಮೆ ಅವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಐಐಟಿ ಮದ್ರಾಸ್ ವತಿಯಿಂದ ಆನ್ಲೈನ್ ವ್ಯಾಸಂಗ ಮತ್ತು ಸಮಾಲೋಚನೆ ಕೋರ್ಸ್ ಗಳ ಉದ್ಘಾಟನಾ ಸಮಾರಂಭವು ಆ.15ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಿತು.
ಐಐಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಫೌಂಡೇಶನ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎಂ.ಜೆ. ಶಂಕರರಮಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಸರಕಾರಿ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿರುವ ಈ ಕೋರ್ಸ್ ಮತ್ತು ವ್ಯಾಸಂಗವು ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಗೊಂದಲವಿಲ್ಲದೆ ಗುರಿ ಸಾಧಿಸಲು ಅನುಕೂಲವಾಗುತ್ತದೆ ಎಂದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಚ್. ಎಸ್. ಶೆಟ್ಟಿ ಪ್ರಸ್ತಾವನೆಗೈದು ಮಾತನಾಡಿ, ಉನ್ನತ ಮಟ್ಟದಲ್ಲಿರುವ ಶಾಲೆ ಕಾಲೇಜುಗಳಲ್ಲಿ ಮಾತ್ರ ಲಭ್ಯವಿರುವ ಈ ಮಾದರಿಯ ಕೋರ್ಸ್ ಗಳು ಮತ್ತು ಸಮಲೋಚನಾ ಕೌನ್ಸಿಲಿಂಗ್ ನಡೆಯುತ್ತದೆ. ನಮ್ಮೂರಿನ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಕೂಡಾ ಈ ವ್ಯವಸ್ಥೆಯನ್ನು ಒದಗಿಸುವ ಉದ್ದೇಶದೊಂದಿಗೆ ಇಂತಹ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಹೆಸರಿಗಾಗಿ ಮಾಡುವ ಕೆಲಸಕ್ಕಿಂತ, ಸಮಾಜದ ಅಭ್ಯುದಯಕ್ಕಾಗಿ ಮಾಡುವ ಕೆಲಸಕ್ಕೆ ಹೆಚ್ಚಿನ ಪುಣ್ಯ ಸಿಗುತ್ತದೆ.ಯಾರು ಒಳ್ಳೆಯ ಕೆಲಸ ಮಾಡುತ್ತಾರೋ ಅವರ ಕೈ ಹಿಡಿದರೆ ಸಾಕು ಅದೂ ಜೀವನದಲ್ಲಿ ಉತ್ತುಂಗದಲ್ಲಿ ಏರಲು ಸಹಕಾರಿಯಾಗುತ್ತದೆ.ಎಚ್ ಎಸ್ ಶೆಟ್ಟಿಯಂತಹ ಪುಣ್ಯಾತ್ಮರು ಈ ಭೂಮಿಯಲ್ಲಿ ಸಾವಿರ ಸಾವಿರ ಮಂದಿ ಹುಟ್ಟಿ ಬರಬೇಕು ಇವತ್ತು ಸಮಾಜ ಸೇವೆಯ ಮುಖೇನ ಸಾರ್ಥಕ ಜೀವನ ಸಾಗಿಸುತ್ತಿರುವ ಎಚ್.ಎಸ್ ಶೆಟ್ಟಿಗೆ ಅಭಾರಿಯಾಗಿದ್ದೇನೆ ಎಂದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ರಾಷ್ಟ್ರವಾದಿ ಚಿಂತಕ ಪಿ.ಎನ್. ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪನಿರ್ದೇಶಕ ಮಾರುತಿ, ಪ್ರೌಢಶಾಲಾ ವಿಭಾಗದ ಉಪನಿರ್ದೇಶಕ ಕೆ. ಗಣಪತಿ, ಐಐಟಿ ಮುಖ್ಯ ನಿರ್ವಹಾಧಿಕಾರಿ ಜಿ. ವೀರ ರಾಘವನ್ ಉಪಸ್ಥಿತರಿದ್ದರು.

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ. ನವೀನ್ ಚಂದ್ರ ಹೆಗ್ಡೆ ಸ್ವಾಗತಿಸಿದರು. ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.
