Featured

ಕಾಪು : ಹೆಸರಿಗಾಗಿ ಮಾಡುವ ಕೆಲಸಕ್ಕಿಂತ, ಸಮಾಜದ ಅಭ್ಯುದಯಕ್ಕಾಗಿ ಮಾಡುವ ಕೆಲಸಕ್ಕೆ ಹೆಚ್ಚಿನ ಪುಣ್ಯ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ -vishwanews24

ಕಾಪು : ಹೆಸರಿಗಾಗಿ ಮಾಡುವ ಕೆಲಸಕ್ಕಿಂತ, ಸಮಾಜದ ಅಭ್ಯುದಯಕ್ಕಾಗಿ ಮಾಡುವ ಕೆಲಸಕ್ಕೆ ಹೆಚ್ಚಿನ ಪುಣ್ಯ ..

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿಕೆ

ಕಾಪು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ನೇತೃತ್ವದಲ್ಲಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು‌ ಸಾಕ್ಷರತಾ ಇಲಾಖೆ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುರ್ಮೆ ಅವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಐಐಟಿ ಮದ್ರಾಸ್‌ ವತಿಯಿಂದ ಆನ್ಲೈನ್ ವ್ಯಾಸಂಗ ಮತ್ತು ಸಮಾಲೋಚನೆ ಕೋರ್ಸ್ ಗಳ ಉದ್ಘಾಟನಾ ಸಮಾರಂಭವು ಆ.15ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಿತು.

ಐಐಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಫೌಂಡೇಶನ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎಂ.ಜೆ. ಶಂಕರರಮಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಸರಕಾರಿ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿರುವ ಈ ಕೋರ್ಸ್ ಮತ್ತು ವ್ಯಾಸಂಗವು ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಗೊಂದಲವಿಲ್ಲದೆ ಗುರಿ ಸಾಧಿಸಲು ಅನುಕೂಲವಾಗುತ್ತದೆ ಎಂದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ‌. ಎಚ್. ಎಸ್. ಶೆಟ್ಟಿ ಪ್ರಸ್ತಾವನೆಗೈದು ಮಾತನಾಡಿ, ಉನ್ನತ ಮಟ್ಟದಲ್ಲಿರುವ ಶಾಲೆ ಕಾಲೇಜುಗಳಲ್ಲಿ ಮಾತ್ರ ಲಭ್ಯವಿರುವ ಈ ಮಾದರಿಯ ಕೋರ್ಸ್ ಗಳು ಮತ್ತು ಸಮಲೋಚನಾ ಕೌನ್ಸಿಲಿಂಗ್ ನಡೆಯುತ್ತದೆ. ನಮ್ಮೂರಿನ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಕೂಡಾ ಈ ವ್ಯವಸ್ಥೆಯನ್ನು ಒದಗಿಸುವ ಉದ್ದೇಶದೊಂದಿಗೆ ಇಂತಹ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದರು.

ಕಾಪು‌ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಹೆಸರಿಗಾಗಿ ಮಾಡುವ ಕೆಲಸಕ್ಕಿಂತ, ಸಮಾಜದ ಅಭ್ಯುದಯಕ್ಕಾಗಿ ಮಾಡುವ ಕೆಲಸಕ್ಕೆ ಹೆಚ್ಚಿನ ಪುಣ್ಯ ಸಿಗುತ್ತದೆ.ಯಾರು ಒಳ್ಳೆಯ ಕೆಲಸ ಮಾಡುತ್ತಾರೋ ಅವರ ಕೈ ಹಿಡಿದರೆ ಸಾಕು ಅದೂ ಜೀವನದಲ್ಲಿ ಉತ್ತುಂಗದಲ್ಲಿ ಏರಲು ಸಹಕಾರಿಯಾಗುತ್ತದೆ.ಎಚ್ ಎಸ್ ಶೆಟ್ಟಿಯಂತಹ ಪುಣ್ಯಾತ್ಮರು ಈ ಭೂಮಿಯಲ್ಲಿ ಸಾವಿರ ಸಾವಿರ ಮಂದಿ ಹುಟ್ಟಿ ಬರಬೇಕು ಇವತ್ತು ಸಮಾಜ ಸೇವೆಯ ಮುಖೇನ ಸಾರ್ಥಕ ಜೀವನ ಸಾಗಿಸುತ್ತಿರುವ ಎಚ್.ಎಸ್ ಶೆಟ್ಟಿಗೆ ಅಭಾರಿಯಾಗಿದ್ದೇನೆ ಎಂದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ರಾಷ್ಟ್ರವಾದಿ ಚಿಂತಕ ಪಿ.ಎನ್.‌ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಉಡುಪಿ‌ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪನಿರ್ದೇಶಕ ಮಾರುತಿ, ಪ್ರೌಢಶಾಲಾ ವಿಭಾಗದ ಉಪನಿರ್ದೇಶಕ ಕೆ. ಗಣಪತಿ, ಐಐಟಿ ಮುಖ್ಯ ನಿರ್ವಹಾಧಿಕಾರಿ ಜಿ. ವೀರ ರಾಘವನ್ ಉಪಸ್ಥಿತರಿದ್ದರು. ‌

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ. ನವೀನ್ ಚಂದ್ರ ಹೆಗ್ಡೆ ಸ್ವಾಗತಿಸಿದರು. ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ‌ ನಿರೂಪಿಸಿದರು. ‌

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago