ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ : ವಿಶ್ವ ನ್ಯೂಸ್24
**ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ**
ಕಾಪು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬಸ್ಥರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಸ್ಥಾನಕ್ಕೆ ಆಗಮಿಸಿದ ಸಚಿವರು ಹಾಗೂ ಕುಟುಂಬಸ್ಥರನ್ನು ದೇವಸ್ಥಾನದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಧಾರ್ಮಿಕ ಹಾಗೂ ಕ್ಷೇತ್ರದ ವಿಶೇಷತೆಗಳ ಕುರಿತು ಮಾಹಿತಿ ವಿನಿಮಯ ನಡೆಯಿತು.

ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೆ. ವಾಸುದೇವ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ, ಪಕ್ಷದ ಪ್ರಮುಖರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
**ವಿಶ್ವ ನ್ಯೂಸ್24 | ಕಾಪು**
