ಕಾಪು: ಕಾಪುವಿನ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಹತ್ತಿರವಾಗುತ್ತಲೇ ಸಮಿತಿಯ ಭಕ್ತರು ಕಾಪುವಿನ ಒಡೆಯ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ಉರುಳು ಸೇವೆ ನಡೆಸಿದ್ದಾರೆ.
ಕಾಪುವಿನ ಅಮ್ಮನ ಜೀರ್ಣೋದ್ಧಾರ ಕಾರ್ಯಗಳು ಮತ್ತು ಮುಂದಿನ ದಿನಗಳಲ್ಲಿ ನಡೆಯಲಿರುವ ಧಾರ್ಮಿಕ ವಿಧಿವಿಧಾನಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಪ್ರಾರ್ಥಿಸಿ, ಇಂದು ಮುಂಜಾನೆ, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಕೆರೆಯಲ್ಲಿ ಮಿಂದು, ದೇವಾಲಯದ ಪ್ರಾಕಾರದಲ್ಲಿ ಉರುಳು ಸೇವೆ ನಡೆಸಿದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಮುಖರಾದ ದೇವಿ ಪ್ರಸಾದ್ ಶೆಟ್ಟಿ, ದಿವಾಕರ್ ಶೆಟ್ಟಿ, ರಮೇಶ್ ಕಲ್ಯಾ, ಗೋವರ್ಧನ್ ಶೇರಿಗಾರ್, ರಘುರಾಮ್ ಶೆಟ್ಟಿ, ಹರೀಶ್ ನಾಯಕ್ ಕಾಪು, ಜಗದೀಶ್ ಬಂಗೇರ ಉರುಳು ಸೇವೆ ನಡೆಸಿದರು.
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…