Featured

ಕಾಪು ಹೊಸ ಮಾರಿಗುಡಿ ದೇವಸ್ಥಾನ : ನವ ಪ್ರದಕ್ಷಿಣಾ ಸೇವೆಗೆ ಚಾಲನೆ- ಆರೋಗ್ಯ ವೃದ್ಧಿಗಾಗಿ ಸಂಕಲ್ಪ – vishwanews24

ಕಾಪು ಹೊಸ ಮಾರಿಗುಡಿ ದೇವಸ್ಥಾನ : ನವ ಪ್ರದಕ್ಷಿಣಾ ಸೇವೆಗೆ ಚಾಲನೆ- ಆರೋಗ್ಯ ವೃದ್ಧಿಗಾಗಿ ಸಂಕಲ್ಪ

ಕಾಪು: ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಳಕ್ಕೆ ಬರುವ ಭಕ್ತರ ಆರೋಗ್ಯ ವೃದ್ಧಿಗಾಗಿ ಸೆಪ್ಟೆಂಬರ್ 28 ರಂದು ನವ ಪ್ರದಕ್ಷಿಣ ಸೇವೆಗೆ ಚಾಲನೆ ನೀಡಲಾಯಿತು.

ಈಗಾಗಲೇ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಆಯುರ್ವೇದಿಕ್ ಸಸ್ಯ, ಹೂವಿನ ಗಿಡಗಳನ್ನು ನೆಡಲಾಗಿದ್ದು. ದೇವಳಕ್ಕೆ ಆಗಮಿಸುವ ಭಕ್ತರಿಗೆ ಉತ್ತಮ ಆರೋಗ್ಯ ಲಭಿಸಬೇಕು ಎಂದು ಈ ಸೇವೆಯನ್ನು ಆರಂಭಿಸಿದ್ದು, ಇನ್ನು ಮುಂದೆ ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಭಕ್ತರು ಈ ಸೇವೆಯಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗುತ್ತದೆ, ಸೇವೆಯಲ್ಲಿ ಭಾಗಿಯಾದ ಭಕ್ತರಿಗೆ ವಿವಿಧ ರೀತಿಯ ಆರೋಗ್ಯ ವರ್ಧಕ ಪಾನಿಯವನ್ನು ನೀಡಲಾಗುವುದು, ನವ ಪ್ರದಕ್ಷಿಣಾ ಸೇವೆಯ ಅಂಗವಾಗಿ 99 ಜನ ದಂಪತಿಗಳು ಏಕಕಾಲದಲ್ಲಿ ದೀಪ ಬೆಳಗಿಸುವ ಮೂಲಕ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಮತ್ತು ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಸಹಯೋಗದೊಂದಿಗೆ ಅಮ್ಮನಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ನೂತನವಾಗಿ ನಿರ್ಮಿಸಲಾದ ಪಾದರಕ್ಷೆ ಇಡುವ ಸ್ಥಳ ಮತ್ತು ಕೈ-ಕಾಲು ತೊಳೆಯುವ ಸ್ಥಳವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ಮನೋಹರ್ ರಾವ್ ಕಲ್ಯ, ಜಯಲಕ್ಷ್ಮಿ ಎಸ್. ಶೆಟ್ಟಿ, ಕೊಡವೂರು ದಿವಾಕರ ಶೆಟ್ಟಿ, ತೊನ್ಸೆ ಮನೋಹರ ಶೆಟ್ಟಿ, ಧಾರ್ಮಿಕ ಸಮಿತಿಯ ಪ್ರಧಾನ ಸಂಚಾಲಕ ಭಗವಾನ್ ದಾಸ್ ಶೆಟ್ಟಿಗಾರ್, ಸಂತೋಷ್ ಶೆಟ್ಟಿ ಹುಬ್ಬಳ್ಳಿ, ನವೀನ್ಚಂದ್ರ ಶೆಟ್ಟಿ ಪಡುಬಿದ್ರಿ, ಶೋಧನ್ ಕುಮಾರ್ ಶೆಟ್ಟಿ ಬೆಳ್ಮಣ್, ಸುರೇಶ್ ಶೆಟ್ಟಿ ಅಯೋಧ್ಯಾ, ಸುಧಾಕರ ಶೆಟ್ಟಿ ಮಕರ, ಕೆ.ವಿಶ್ವನಾಥ್, ಡಾ. ಪ್ರಶಾಂತ್ ಶೆಟ್ಟಿ, ಡಾ.ಯೋಗೀಶ್ ಶೆಟ್ಟಿ, ಉದಯ ಹೆಗ್ಡೆ ಮಲ್ಲಾರ್, ಮಹೇಶ್ ರೈ ಭಂಡಾರ ಮನೆ,ಅನಿಲ್ ಕುಮಾರ್ ಕಾಪು ,ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಸಾವಿತ್ರಿ ಗಣೇಶ್, ನವೀನ್ ಸಾಲ್ಯಾನ್, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ಸುನಿಲ್ ಪೂಜಾರಿ, ಸಂದೀಪ್ ಕುಮಾರ್ ಮಂಜ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

7 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

7 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago