Featured

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಾರಿಯಮ್ಮ ದೇವಿ, ಉಚ್ಚಂಗಿ ಗುಡಿಯಲ್ಲಿ ವಿವಿಧ ಸಮಿತಿ ಮತ್ತು ಸಮಾಜ ಭಾಂಧವರ ಮೂಲಕ ಪುಷ್ಪಾರ್ಚನೆ- vishwanews24

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಾರಿಯಮ್ಮ ದೇವಿ, ಉಚ್ಚಂಗಿ ಗುಡಿಯಲ್ಲಿ ವಿವಿಧ ಸಮಿತಿ ಮತ್ತು ಸಮಾಜ ಭಾಂಧವರ ಮೂಲಕ ಪುಷ್ಪಾರ್ಚನೆ.

ಕಾಪು : ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಪ್ರಥಮ ಹಂತದಲ್ಲಿ ಆಯೋಜಿಸಲಾಗಿದ್ದ ಶಿಲಾ ಸೇವೆ ಸಮರ್ಪಣೆ ಮತ್ತು ಪುಷ್ಪಾರ್ಚನೆಯ ಪ್ರಯುಕ್ತ ಬುಧವಾರ ಸಂಜೆ ವಿವಿಧ ಸಮಿತಿ ಮತ್ತು ಸಮಾಜ ಭಾಂಧವರ ಮೂಲಕ ಮಾರಿಯಮ್ಮ ದೇವಿ ಮತ್ತು ಉಚ್ಚಂಗಡಿ ದೇವಿಯ ಯೋಜಿತ ಗರ್ಭಗುಡಿಗೆ ಸಾಮೂಹಿಕ ಪುಷ್ಪಾರ್ಚನೆ ನಡೆಸಿ, ಪ್ರಾರ್ಥನೆ ಸಲ್ಲಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ / ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಹೊಸ ಮಾರಿಗುಡಿ ಸಮಗ್ರ ಅಭಿವೃದ್ಧಿ ಕುರಿತಾದ ಹಲವು ವರ್ಷಗಳ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ವಿವಿಧ ಸಿದ್ಧತೆಗಳನ್ನು ನಡೆಸಿದ್ದು ಅದರ ಪ್ರಯುಕ್ತ ಶಿಲಾ ಸೇವೆ ಸಮರ್ಪಣೆಗೆ ಚಾಲನೆ ನೀಡಲಾಗಿದೆ. ಶಿಲಾ ಸೇವೆ ಸಹಿತವಾಗಿ ಭಕ್ತಾ„ಗಳ ತನು, ಮನ, ಧನ ರೂಪದ ಸಹಕಾರದೊಂದಿಗೆ ಮುಂದಿನ ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲೇ ಮಾರಿಯಮ್ಮ ಮತ್ತು ಉಚ್ಚಂಗಿ ಗುಡಿಯನ್ನು ಸಮರ್ಪಿಸಲು ಪ್ರಯತ್ನಿಸಲಾಗುವುದು ಎಂದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಹೊಸ ಮಾರಿಗುಡಿಯ ನವ ನಿರ್ಮಾಣ – ಪುನರುತ್ಥಾನಕ್ಕೆ ಎಲ್ಲರ ದೇಣಿಗೆಯೂ ಸಮರ್ಪಿತವಾಗಬೇಕೆಂಬ ಚಿಂತನೆಯೊಂದಿಗೆ ಶಿಲಾ ಸೇವೆ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು 9 ತಿಂಗಳಲ್ಲಿ 9 ಲಕ್ಷ ಸಂಖ್ಯೆಯ ಶಿಲಾ ಸೇವೆಯನ್ನು ಸಮರ್ಪಿಸಲು ಸಂಕಲ್ಪಿಸಲಾಗಿದೆ. ಭಕ್ತರಿ ನಿರಂತರವಾಗಿ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ನೀಡಲಾಗುತ್ತಿದ್ದು ಪ್ರತೀ ಮಂಗಳವಾರವೂ ಮಾರಿಗುಡಿಗೆ ಭೇಟಿ ನೀಡಿ ತಮ್ಮ ಶಕ್ತ್ಯಾನುಸಾರ ಶಿಲಾ ಸೇವೆಯನ್ನು ಸಮರ್ಪಿಸಬಹುದಾಗಿದೆ ಎಂದರು.
ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ರಚಿತಗೊಂಡ ಆರ್ಥಿಕ ಸಮಿತಿ, ಪ್ರಚಾರ ಸಮಿತಿ, ಸ್ವಯಂ ಸೇವಕರ ಸಮಿತಿಯ ಪ್ರಧಾನ ಸಂಚಾಲಕರ ನೇತೃತ್ವದಲ್ಲಿ ಸಂಚಾಲಕರುಗಳು ಮತ್ತು ಸದಸ್ಯರುಗಳು ತ್ರಿಕರಣ ಪೂರ್ವಕವಾಗಿ ಹಗಲು ರಾತ್ರಿ ಸೇವೆ ಸಲ್ಲಿಸಿದ ಪರಿಣಾಮವಾಗಿ ಶಿಲಾ ಸೇವೆ ಸಮರ್ಪಣಾ ಕಾರ್ಯಕ್ರಮ ಯಶಸ್ವಿಯಾಗಿ ಜರಗುವಂತಾಗಿದೆ. ಮುಂದೆಯೂ ಎಲ್ಲರೂ ಜೊತೆಗೂಡಿ ಕಾರ್ಯ ನಿರ್ವಹಿಸೋಣ ಎಂದರು.
ಕಾಪು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾ„ಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು, ಗಂಗಾಧರ ಸುವರ್ಣ, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ., ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಬಾಬು ಮಲ್ಲಾರು, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಪತ್ರಕರ್ತ ರಾಕೇಶ್ ಕುಂಜೂರು,  ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪದಾ„ಕಾರಿಗಳು, ಆರ್ಥಿಕ ಸಮಿತಿ ಮತ್ತು ಪ್ರಚಾರ ಸಮಿತಿಯ ಸಂಚಾಲಕರುಗಳು, ವಿವಿಧ ಸಮಾಜಗಳ ಪ್ರತಿನಿ„ಗಳು ಮತ್ತು ಕಾಪು ಸಾವಿರ ಸೀಮೆಯ ಹತ್ತು ಸಮಸ್ತರು ಉಪಸ್ಥಿತರಿದ್ದರು. ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

13 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

14 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

14 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

15 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

16 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

16 hours ago