ಕಾಪು: ಸಮಗ್ರ ಜೀರ್ಣೋ ದ್ಧಾರವಾಗಿ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನ್ನಿಧ್ಯಾಭಿವೃದ್ಧಿ ಮತ್ತು ಲೋಕಕಲ್ಯಾರ್ಥ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ| ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ಫೆ. 4ರಂದು ನವಚಂಡೀಯಾಗ ನಡೆಯಲಿದೆ ಎಂದು ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ಹೇಳಿದರು.
ಫೆ. 3ರಂದು ಬೆಳಗ್ಗೆ 9 ಗಂಟೆಗೆ ಸಾಮೂಹಿಕ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಾತೃಕಾ ಪೂಜನಂ, ನಾಂದಿ ಸಮಾರಾಧನಂ, ಅರಳಿ ಪೂಜನಂ, ವೇದ ಪಾರಾಯಣಂ, ಅರಣೀ ಮತನಂ, ಅಗ್ನಿ ಸಂರಕ್ಷಣಂ, ನಿರ್ವಿಘ್ನಾಂಗ ಆದ್ಯಗಣಯಾಗ, ಸಂಜೆ 5.30ಕ್ಕೆ ನವಚಂಡಿಪಾರಾಯಣಂ, ಕುಂಡ ಸಂಸ್ಕಾರ, ಅಗ್ನಿ ಜನನಂ, ವಾಗೆªàವತಾ ಪೂಜೆ, ಅಷ್ಟಾವಧಾನಂ ನಡೆಯಲಿದೆ.
ಫೆ. 4ರಂದು ಬೆಳಗ್ಗೆ 6.30ಕ್ಕೆ ನವಚಂಡೀಯಾಗ ಆರಂಭ, ಕಲೊ³àಕ್ತ ಪೂಜೆ, ಮಹಾಮಂಗಳಾರತಿ, 11 ಗಂಟೆಗೆ ಪೂರ್ಣಾಹುತಿ, ಮಹಾಪ್ರಸಾದ ಹಾಗೂ ಅನ್ನಪ್ರಸಾದ ವಿತರಣೆ ನಡೆಯಲಿದೆ.
ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಉಡುಪಿ ಶ್ರೀ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಡಾ| ರಾಮಲಿಂಗಾ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿರುವರು. ವಿಧಾನ ಪರಿಷತ್ ಸದಸ್ಯ ಡಾ| ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತ ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದರು.
ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಸಂಚಾಲಕ ಸುವರ್ಧನ ನಾಯಕ್, ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ. ಸುವರ್ಣ, ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…