Featured

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ  : ಜಿತೇಂದ್ರ ಶೆಟ್ಟಿ ಉದ್ಯಾವರ – vishwanews24

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ  : ಜಿತೇಂದ್ರ ಶೆಟ್ಟಿ ಉದ್ಯಾವರ

ಇತಿಹಾಸ ಪ್ರಸಿದ್ಧವಾದ ಹಿಂದೂ ಧರ್ಮದ ಎಲ್ಲಾ ಜಾತಿ ಬಾಂಧವರ ಆರಾಧ್ಯ ಕ್ಷೇತ್ರವಾಗಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನವು ಊರ ಮತ್ತು ಪರವೂರ ಭಕ್ತರ ನೆರವಿನಿಂದ ಭವ್ಯ ಮಂದಿರದ ನಿರ್ಮಾಣಗೊಂಡ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈ ದೇವಸ್ಥಾನಕ್ಕೆ ಸರಕಾರ ವ್ಯವಸ್ಥಾಪನ ಸಮಿತಿಯನ್ನು ಮಾಜಿ ಸಚಿವರ ಶಿಫಾರಸ್ಸಿನ ಮೇರೆಗೆ ರಚಿಸಿದ್ದು ಸದ್ರಿ ಸಮಿತಿಯಲ್ಲಿ ಮೊಗವೀರ ಸಮಾಜದ ಸಜ್ಜನ ಶ್ರೀಧರ್ ಕಾಂಚನ್‌ರವರು ನೇಮಕಗೊಂಡಿದ್ದು, ತದ ನಂತರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ. ಇವರ ತೆರವಾದ ಸ್ಥಾನಕ್ಕೆ ಇದೇ ಸಮಾಜದ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕಾಗಿದ್ದು ಸಾಮಾಜಿಕ ನ್ಯಾಯವಾಗಿರುತ್ತದೆ. ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಧಾರ್ಮಿಕತೆಯನ್ನೇ ಮೈಗೂಡಿಸಿಕೊಂಡು ಬಂದ ಮೊಗವೀರ ಸಮಾಜದ ಪ್ರತಿನಿಧಿಗೆ ಅವಕಾಶ ನೀಡದೆ ಬೇರೆ ಜಾತಿಯ ಪ್ರತಿನಿಧಿಯನ್ನು ರಾಜ್ಯ ಸರಕಾರದ ಸದಸ್ಯ ಕಾರ್ಯದರ್ಶಿ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಬೆಂಗಳೂರು ಆದೇಶಿಸಿರುವುದು ಖಂಡನೀಯ.

ಕಾಪು ಕ್ಷೇತ್ರದ ಎಲ್ಲಾ ದೇವಸ್ಥಾನ ಮತ್ತು ಅಧಿಕಾರಿ ವರ್ಗವನ್ನು ತನ್ನ ಶಿಫಾರಸ್ಸಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚಿಸುತ್ತಿರುವ ಮಾಜಿ ಸಚಿವರಿಗೆ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕವನ್ನು ಕಾಂಗ್ರೆಸ್ ಸರಕಾರವೇ ನಿಯುಕ್ತಿಗೊಳಿಸಿದ್ದು ತಿಳಿದಿಲ್ಲ ಎನ್ನುವಂತಹದ್ದು ನಂಬಲು ಸಾಧ್ಯವೇ? ಅಲ್ಲದೇ, ಕೆಲವು ಕಾಂಗ್ರೆಸ್ ನಾಯಕರುಗಳು ಕಾಂಗ್ರೆಸ್ ಪಕ್ಷದ ನಾಯಕರ ಒಣ ಪ್ರತಿಷ್ಠೆಯಿಂದ ಈ ನೇಮಕ ನಡೆದಿದೆ ಎಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ಯಾವ ನಾಯಕರು ಈ ಒಣ ಪ್ರತಿಷ್ಠೆಯಿಂದ ದೊಡ್ಡ ಸಮುದಾಯವಾದ ಮೊಗವೀರ ಸಮಾಜವನ್ನ ಅವಗಣಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಕಾಂಗ್ರೆಸ್ ಪಕ್ಷದ ಭಿನ್ನಾಭಿಪ್ರಾಯದಿಂದ ಮತ್ತು ನಾಯಕರ ಹೊಂದಾಣಿಕಾ ಕೊರತೆಯಿಂದಾಗಿ ಇಂತಹ ಹೇಳಿಕೆಗಳನ್ನು ನೀಡಿ ಹಿಂದೂ ಧರ್ಮದ ಏಕತೆಯಲ್ಲಿ ಜಾತಿ-ಜಾತಿಗಳ ನಡುವೆ ವೈಮನಸ್ಸನ್ನ ಮೂಡಿಸುವ ಬದಲು ಮೊಗವೀರ ಸಮಾಜದ ಪ್ರತಿನಿಧಿಯನ್ನು ಶೀಘ್ರವಾಗಿ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೇಮಿಸಿ ರಾಜ್ಯ ಸರಕಾರದಿಂದ ಆದೇಶಿಸುವಂತೆ ವಿನಂತಿಸುತ್ತೇವೆ. ಇಲ್ಲವಾದಲ್ಲಿ ಮೊಗವೀರ ಮಹಾಸಭಾ ಕೈಗೊಳ್ಳುವ ನಿರ್ಣಯಕ್ಕೆ ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಸಂಪೂರ್ಣ ಬೆಂಬಲವನ್ನ ನೀಡಲಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

14 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago