ಇತಿಹಾಸ ಪ್ರಸಿದ್ಧವಾದ ಹಿಂದೂ ಧರ್ಮದ ಎಲ್ಲಾ ಜಾತಿ ಬಾಂಧವರ ಆರಾಧ್ಯ ಕ್ಷೇತ್ರವಾಗಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನವು ಊರ ಮತ್ತು ಪರವೂರ ಭಕ್ತರ ನೆರವಿನಿಂದ ಭವ್ಯ ಮಂದಿರದ ನಿರ್ಮಾಣಗೊಂಡ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈ ದೇವಸ್ಥಾನಕ್ಕೆ ಸರಕಾರ ವ್ಯವಸ್ಥಾಪನ ಸಮಿತಿಯನ್ನು ಮಾಜಿ ಸಚಿವರ ಶಿಫಾರಸ್ಸಿನ ಮೇರೆಗೆ ರಚಿಸಿದ್ದು ಸದ್ರಿ ಸಮಿತಿಯಲ್ಲಿ ಮೊಗವೀರ ಸಮಾಜದ ಸಜ್ಜನ ಶ್ರೀಧರ್ ಕಾಂಚನ್‌ರವರು ನೇಮಕಗೊಂಡಿದ್ದು, ತದ ನಂತರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ. ಇವರ ತೆರವಾದ ಸ್ಥಾನಕ್ಕೆ ಇದೇ ಸಮಾಜದ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕಾಗಿದ್ದು ಸಾಮಾಜಿಕ ನ್ಯಾಯವಾಗಿರುತ್ತದೆ. ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಧಾರ್ಮಿಕತೆಯನ್ನೇ ಮೈಗೂಡಿಸಿಕೊಂಡು ಬಂದ ಮೊಗವೀರ ಸಮಾಜದ ಪ್ರತಿನಿಧಿಗೆ ಅವಕಾಶ ನೀಡದೆ ಬೇರೆ ಜಾತಿಯ ಪ್ರತಿನಿಧಿಯನ್ನು ರಾಜ್ಯ ಸರಕಾರದ ಸದಸ್ಯ ಕಾರ್ಯದರ್ಶಿ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಬೆಂಗಳೂರು ಆದೇಶಿಸಿರುವುದು ಖಂಡನೀಯ.
ಕಾಪು ಕ್ಷೇತ್ರದ ಎಲ್ಲಾ ದೇವಸ್ಥಾನ ಮತ್ತು ಅಧಿಕಾರಿ ವರ್ಗವನ್ನು ತನ್ನ ಶಿಫಾರಸ್ಸಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚಿಸುತ್ತಿರುವ ಮಾಜಿ ಸಚಿವರಿಗೆ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕವನ್ನು ಕಾಂಗ್ರೆಸ್ ಸರಕಾರವೇ ನಿಯುಕ್ತಿಗೊಳಿಸಿದ್ದು ತಿಳಿದಿಲ್ಲ ಎನ್ನುವಂತಹದ್ದು ನಂಬಲು ಸಾಧ್ಯವೇ? ಅಲ್ಲದೇ, ಕೆಲವು ಕಾಂಗ್ರೆಸ್ ನಾಯಕರುಗಳು ಕಾಂಗ್ರೆಸ್ ಪಕ್ಷದ ನಾಯಕರ ಒಣ ಪ್ರತಿಷ್ಠೆಯಿಂದ ಈ ನೇಮಕ ನಡೆದಿದೆ ಎಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ಯಾವ ನಾಯಕರು ಈ ಒಣ ಪ್ರತಿಷ್ಠೆಯಿಂದ ದೊಡ್ಡ ಸಮುದಾಯವಾದ ಮೊಗವೀರ ಸಮಾಜವನ್ನ ಅವಗಣಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಕಾಂಗ್ರೆಸ್ ಪಕ್ಷದ ಭಿನ್ನಾಭಿಪ್ರಾಯದಿಂದ ಮತ್ತು ನಾಯಕರ ಹೊಂದಾಣಿಕಾ ಕೊರತೆಯಿಂದಾಗಿ ಇಂತಹ ಹೇಳಿಕೆಗಳನ್ನು ನೀಡಿ ಹಿಂದೂ ಧರ್ಮದ ಏಕತೆಯಲ್ಲಿ ಜಾತಿ-ಜಾತಿಗಳ ನಡುವೆ ವೈಮನಸ್ಸನ್ನ ಮೂಡಿಸುವ ಬದಲು ಮೊಗವೀರ ಸಮಾಜದ ಪ್ರತಿನಿಧಿಯನ್ನು ಶೀಘ್ರವಾಗಿ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೇಮಿಸಿ ರಾಜ್ಯ ಸರಕಾರದಿಂದ ಆದೇಶಿಸುವಂತೆ ವಿನಂತಿಸುತ್ತೇವೆ. ಇಲ್ಲವಾದಲ್ಲಿ ಮೊಗವೀರ ಮಹಾಸಭಾ ಕೈಗೊಳ್ಳುವ ನಿರ್ಣಯಕ್ಕೆ ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಸಂಪೂರ್ಣ ಬೆಂಬಲವನ್ನ ನೀಡಲಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…