ಕಾಪು : ಇಲ್ಲಿನ ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯಿತಿಯ ಹಾಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುಧಾಕರ ಶೆಟ್ಟಿ ಅವರನ್ನು ಆರ್ಥಿಕ ಅವ್ಯವಹಾರ ಆರೋಪದಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ನಿಯಮ ಸಂಖ್ಯೆ 8 (viii) ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್‌ನ ಆಯುಕ್ತರು ಅಧಿಕಾರಿಯನ್ನು ಸಾರ್ವಜನಿಕ ಸೇವೆಯಿಂದ ತಕ್ಷಣ ವಜಾಗೊಳಿಸುವಂತೆ ಆದೇಶಿಸಿದ್ದಾರೆ.
ಸುಧಾಕರ ಶೆಟ್ಟಿ ಅವರು ಕಾರ್ಕಳದ ಕುಕ್ಕುಂದೂರು ಗ್ರಾ.ಪಂ.ಪಿಡಿಒ ಆಗಿ ಸೇವೆ ಸಲ್ಲಿಸುತ್ತಿದ್ದಾಗ ಈ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಟ್ಟು ಏಳು ಪ್ರಕರಣಗಳಲ್ಲಿ ಸುಧಾಕರ ಶೆಟ್ಟಿ ಸರ್ಕಾರದ ಬೊಕ್ಕಸದಿಂದ 34.42 ಲಕ್ಷ ರೂ. ದುರ್ಬಳಕೆ ಮಾಡಿರುವುದು ಸಾಬೀತಾಗಿದೆ.
ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಸಲ್ಲಿಸಿದ ತನಿಖಾ ವರದಿಯ ಮೇರೆಗೆ ಸುಧಾಕರ ಶೆಟ್ಟಿಯವರ ವಿರುದ್ಧ ಮಾಡಲಾದ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ನಿಜವೆಂದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…