ಕಾಪು: ಕರಾವಳಿ ಪ್ರವಾಸೋದ್ಯಮ, ಹೊಸ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಪುಚಾರ ನಡೆಸಿ, ಉತ್ತರ ಭಾರತ ಸಹಿತವಾಗಿ ಮೇಘಾಲಯ, ಮಿರೋರಾಂ, ಒಡಿಶಾ ಸಹಿತ 19 ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಮರಳಿದ ಶಟರ್ ಬಾಕ್ಸ್ ಖ್ಯಾತಿಯ ಕಾಪು ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡವನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸ್ವಾಗತಿಸಲಾಯಿತು.
ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕಲ್ಯ, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಮೊದಲಾದವರು ಸ್ವಾಗತಿಸಿದರು. ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಅವರು ಶ್ರೀ ಮಾರಿಯಮ್ಮ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪುಸಾದ ನೀಡಿ ಗೌರವಿಸಿದರು.
ಈ ಸಂದರ್ಭ ಸಚಿನ್ ಶೆಟ್ಟಿ, ಮಾತನಾಡಿ, ಕಳೆದ ಅಕ್ಟೋಬರ್ 5ರಂದು ಹೊಸ ಮಾರಿಗುಡಿಯಿಂದ ಹೊರಟು ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರ, ಮಿರೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಈಶಾನ್ಯ ರಾಜ್ಯಗಳ ಅಧ್ಯಯನ ಪವಾಸ ಮಾಡಿ 53 ದಿನಗಳ ನಂತರ ಕಾಪುವಿಗೆ ಆಗಮಿಸಿದ್ದೇವೆ. ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರದ ಬಗ್ಗೆ, ನವದುರ್ಗಾ ಲೇಖನ ಯಜ್ಞದ ಬಗ್ಗೆಯೂ ವಿವಿಧೆಡೆ ಮಾಹಿತಿ ನೀಡಿದ್ದು, 53 ದಿನಗಳ ಪ್ರವಾಸದಲ್ಲಿ 13 ಸಾವಿರಕ್ಕೂ ಅಧಿಕ ಕಿಲೋಮೀಟರ್ ಸಂಚರಿಸಿದ್ದೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…