Featured

ಕಾಪು: 53 ದಿನಗಳ ಈಶಾನ್ಯ ರಾಜ್ಯ ಪ್ರವಾಸ ಮುಗಿಸಿದ ಕಾಪುವಿನ ಯುವಕರಿಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅಭಿನಂದನೆ – vishwanews24

ಕಾಪು: 53 ದಿನ 19 ರಾಜ್ಯಗಳಲ್ಲಿ ಪ್ರವಾಸ , 13 ಸಾವಿರಕ್ಕೂ ಅಧಿಕ ಕಿಲೋಮೀಟರ್ ಸಂಚಾರ : ಶಟರ್ ಬಾಕ್ಸ್ ಖ್ಯಾತಿಯ ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡ

ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ , ನವದುರ್ಗಾ ಲೇಖನ ಯಜ್ಞದ ಬಗ್ಗೆ ವಿವಿಧೆಡೆ ಮಾಹಿತಿ ನೀಡಿದ್ದೇವೆ : ಸಚಿನ್ ಶೆಟ್ಟಿ

ಕಾಪು: ಕರಾವಳಿ ಪ್ರವಾಸೋದ್ಯಮ, ಹೊಸ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಪುಚಾರ ನಡೆಸಿ, ಉತ್ತರ ಭಾರತ ಸಹಿತವಾಗಿ ಮೇಘಾಲಯ, ಮಿರೋರಾಂ, ಒಡಿಶಾ ಸಹಿತ 19 ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಮರಳಿದ ಶಟರ್ ಬಾಕ್ಸ್ ಖ್ಯಾತಿಯ ಕಾಪು ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡವನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸ್ವಾಗತಿಸಲಾಯಿತು.

ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕಲ್ಯ, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಮೊದಲಾದವರು ಸ್ವಾಗತಿಸಿದರು. ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಅವರು ಶ್ರೀ ಮಾರಿಯಮ್ಮ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪುಸಾದ ನೀಡಿ ಗೌರವಿಸಿದರು.

ಈ ಸಂದರ್ಭ ಸಚಿನ್‌ ಶೆಟ್ಟಿ, ಮಾತನಾಡಿ, ಕಳೆದ ಅಕ್ಟೋಬರ್ 5ರಂದು ಹೊಸ ಮಾರಿಗುಡಿಯಿಂದ ಹೊರಟು ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರ, ಮಿರೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಈಶಾನ್ಯ ರಾಜ್ಯಗಳ ಅಧ್ಯಯನ ಪವಾಸ ಮಾಡಿ 53 ದಿನಗಳ ನಂತರ ಕಾಪುವಿಗೆ ಆಗಮಿಸಿದ್ದೇವೆ. ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರದ ಬಗ್ಗೆ, ನವದುರ್ಗಾ ಲೇಖನ ಯಜ್ಞದ ಬಗ್ಗೆಯೂ ವಿವಿಧೆಡೆ ಮಾಹಿತಿ ನೀಡಿದ್ದು, 53 ದಿನಗಳ ಪ್ರವಾಸದಲ್ಲಿ 13 ಸಾವಿರಕ್ಕೂ ಅಧಿಕ ಕಿಲೋಮೀಟರ್ ಸಂಚರಿಸಿದ್ದೇವೆ ಎಂದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

1 hour ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago