Featured

ಕಾಪು: 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್ ನ  ಸದಸ್ಯ ಅರೆಸ್ಟ್ – vishwanews24

ಕಾಪು: 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್ ನ  ಸದಸ್ಯ ಅರೆಸ್ಟ್

ಕಾಪು: ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಏಳು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯನೊಬ್ಬನನ್ನು ಕಾಪು ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಂದಾಪುರ ಮುಸ್ಲಿಂ ಕೇರಿಯ ನಿವಾಸಿ ಮೊಹಮ್ಮದ್ ಆಸಿಫ್ (35) ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. 2025ರ ಫೆಬ್ರವರಿ ಇಂದ ಆರೋಪಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ತಾನು ನೀಡಿದ್ದ ವಿಳಾಸದಲ್ಲಿರದೆ ತಲೆಮರೆಸಿಕೊಂಡಿದ್ದನು.

ಕಾಪು ಪೊಲೀಸ್ ಠಾಣೆ ಮಾತ್ರವಲ್ಲದೆ, ಗಂಗೊಳ್ಳಿ ಠಾಣೆಯಲ್ಲಿ ನಾಲ್ಕು ಪ್ರಕರಣಗಳು, ಬೈಂದೂರು, ಕಂಕನಾಡಿ (ಮಂಗಳೂರು) ಮತ್ತು ಉಪ್ಪಿನಂಗಡಿ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ.

ಸೆಪ್ಟೆಂಬರ್ 18ರಂದು ಕಾಪು ಪೊಲೀಸ್ ಸಿಬ್ಬಂದಿಗಳಾದ ಮೊಹಮ್ಮದ್ ರಫೀಕ್, ಮೋಹನ್ ಚಂದ್ರ ಮತ್ತು ಗಣೇಶ್ ಶೆಟ್ಟಿ ಅವರು ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ಆಸಿಫ್‌ನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅಕ್ಟೋಬರ್ 16ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನ್ಯಾಯಾಲಯದ ಆದೇಶದಂತೆ ಆತನನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

23 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago