Featured

ಕಾಪು: RCB ವಿರುದ್ಧ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿದ್ದ ಯುವಕನಿಗೆ ತಂಡದಿಂದ ಹಲ್ಲೆ ; ಜೀವ ಬೆದರಿಕೆ – Vishwanews24

ಕಾಪು: RCB ವಿರುದ್ಧ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿದ್ದ ಯುವಕನಿಗೆ ತಂಡದಿಂದ ಹಲ್ಲೆ

ಕಾಪು: ಐಪಿಎಲ್‌ ಪಂದ್ಯಾಟದಲ್ಲಿ ಸಿಎಸ್‌ಕೆ ತಂಡ ಗೆದ್ದಿದ್ದಕ್ಕೆ ಸಂಭ್ರಮಿಸಿ ಮತ್ತು ಆರ್‌ಸಿಬಿ ತಂಡ ಸೋತದ್ದಕ್ಕೆ ಟ್ರೋಲ್‌ ಮಾಡಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿದ್ದ ಯುವಕನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಲ್ಲಾರು ಕೊಂಬಗುಡ್ಡೆಯಲ್ಲಿ ನಡೆದಿದೆ.

ಮಲ್ಲಾರು ಕೊಂಬಗುಡ್ಡೆ ನಿವಾಸಿ ವರ್ಷಿತ್‌ ಪೂಜಾರಿ ಐಪಿಎಲ್‌ ಪಂದ್ಯಾಟದಲ್ಲಿ ಸಿಎಸ್‌ಕೆ ತಂಡ ಗೆದ್ದಿರುವ ಬಗ್ಗೆ ತನ್ನ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಹಾಕಿದ್ದು, ಜತೆಗೆ ಆರ್‌ಸಿಬಿ ಟೀಮ್‌ ಅನ್ನು ಟ್ರೋಲ್‌ ಮಾಡಿ ಪೋಸ್ಟ್‌ ಹಾಕಿದ್ದಕ್ಕೆ ರಾಘವೇಂದ್ರ ಎಂಬಾತ ಫೋನ್‌ ಕರೆ ಮಾಡಿ ಆಕ್ಷೇಪಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನು. ಜತೆಗೆ ವರ್ಷಿತ್‌ನ ತಂದೆ-ತಾಯಿ ಬಗ್ಗೆಯೂ ನಿಂದಿಸಿದ್ದು ನೀನು ನಾಳೆ ಗ್ರೌಂಡ್‌ಗೆ ಬಾ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಮೇ 26ರಂದು ರಾಘವೇಂದ್ರ ಮತ್ತೆ ಕರೆ ಮಾಡಿ ನಾನು ಗ್ರೌಂಡ್‌ನ‌ಲ್ಲಿದ್ದೇನೆ ನೀನು ಕೂಡಲೇ ಬಾ ಎಂದು ಹೇಳಿದ್ದು ಗ್ರೌಂಡ್‌ಗೆ ಹೋದಾಗ ಅಲ್ಲಿ ರಾಘವೇಂದ್ರ, ಸುಧೀರ ಮತ್ತಿತರರು ಜತೆಗೂಡಿ ಆರ್‌ಸಿಬಿ ಟೀಂ ವಿರುದ್ಧ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ ಹಾಕುತ್ತಿಯಾ ಎಂದು ಬೈದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ರಾಘವೇಂದ್ರ ವರ್ಷಿತ್‌ಗೆ ಹೊಡೆಯುತ್ತಿರುವುದನ್ನು ಕಂಡು ಗ್ರೌಂಡ್‌ನ‌ಲ್ಲಿ ಆಟವಾಡಲು ಬಂದಿದ್ದ ಸ್ವರೂಪ್‌, ವಿಕ್ಕಿ ಬರುವುದನ್ನು ಕಂಡು ಜೀವ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿದ್ದಾನೆ ಎಂದು ವರ್ಷಿತ್‌ ಕಾಪು ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವರ್ಷಿತ್‌ನನ್ನು ಸ್ವರೂಪ್‌ ಮತ್ತಿತರರು ಚಿಕಿತ್ಸೆಯ ಬಗ್ಗೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

32 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

37 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

1 hour ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

1 hour ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago