Featured

ಕಾಮನ್ವೆಲ್ತ್ ಗೇಮ್ಸ್ ;  ಲಾಂಗ್ ಜಂಪ್‌ನಲ್ಲಿ ರಜತ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಮುರಳಿ ಶ್ರೀಶಂಕರ್ – Vishwanews24

ಕಾಮನ್ವೆಲ್ತ್ ಗೇಮ್ಸ್ ;  ಲಾಂಗ್ ಜಂಪ್‌ನಲ್ಲಿ ರಜತ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಮುರಳಿ ಶ್ರೀಶಂಕರ್

ಬರ್ಮಿಂಗಂ: ಇಂಗ್ಲೆಂಡ್ ನ ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಪುರುಷರ ಲಾಂಗ್ ಜಂಪ್ ನಲ್ಲಿ ಭಾರತದ ಮುರಳಿ ಶ್ರೀಶಂಕರ್ ಅವರು ರಜತ ಪದಕ ಗೆದ್ದುಕೊಂಡಿದ್ದಾರೆ.

8.08 ಮೀಟರ್ ಜಂಪ್ ಮಾಡಿದ ಮುರಳಿ ಶ್ರೀಶಂಕರ್ ಮೊದಲ ಬಾರಿಗೆ ಕಾಮನ್ವೆಲ್ತ್ ಪದಕ ಗೆದ್ದರು.

ಮುರಳಿ ಶ್ರೀಶಂಕರ್ ಗೆ ಚಿನ್ನ ಗೆಲ್ಲುವ ಅವಕಾಶವಿತ್ತು. ಚಿನ್ನದ ಪದಕ ಗೆದ್ದ ಬಹಾಮಾಸ್ ನ ಲಕ್ವಾನ್ ನಾಯರ್ನ್ ಕೂಡಾ 8.08 ಮೀಟರ್ ಜಂಪ್ ಮಾಡಿದ್ದರು. ನಿಯಮದ ಪ್ರಕಾರ ಇಬ್ಬರ ಬೆಸ್ಟ್ ಜಂಪ್ ಟೈ ಆದರೆ ಅವರ ಸೆಕೆಂಡ್ ಬೆಸ್ಟ್ ಜಂಪ್ ಆಧಾರದಲ್ಲಿ ವಿಜೇತರನ್ನು ಘೋಷಣೆ ಮಾಡಲಾಗುತ್ತದೆ. ಅದರಂತೆ ಮುರಳಿ ಶ್ರೀಶಂಕರ್ ಅವರ ಸೆಕೆಂಡ್ ಬೆಸ್ಟ್ ಜಂಪ್ 7.84 ಆಗಿದ್ದರೆ, ಲಕ್ವಾನ್ ನಾಯರ್ನ್ ಅವರು 7.98 ಮೀ ಜಿಗಿದಿದ್ದರು. ಹೀಗಾಗಿ ಅವರಿಗೆ ಸ್ವರ್ಣ ಪದಕ ಪ್ರಾಪ್ತವಾಯಿತು.

ದಕ್ಷಿಣ ಆಫ್ರಿಕಾದ ಜೋವನ್ ವ್ಯಾನ್ ವುರೆನ್ 8.06 ಮೀ ಜಂಪ್ ನೊಂದಿಗೆ ಕಂಚು ಗೆದ್ದರು. ಭಾರತದ ಮತ್ತೋರ್ವ ಅಥ್ಲೀಟ್ ಮೊಹಮ್ಮದ್ ಅನೀಸ್ ಯಹಿಯಾ ಅವರು 7.97 ಮೀಟರ್ ಜಂಪ್ ನೊಂದಿಗೆ ಐದನೇ ಸ್ಥಾನ ಪಡೆದರು.

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪುರುಷ ಲಾಂಗ್ ಜಂಪರ್‌ ಗಳಲ್ಲಿ ಮುರಳಿ ಶ್ರೀಶಂಕರ್ ಅವರ ಬೆಳ್ಳಿ ಅತ್ಯುತ್ತಮ ಪ್ರದರ್ಶನವಾಗಿದೆ. ಈ ಹಿಂದೆ 1978ರಲ್ಲಿ ಸುರೇಶ್ ಬಾಬು ಕಂಚು ಗೆದ್ದಿದ್ದೆ ಇದುವರೆಗಿನ ಅತ್ಯುತ್ತಮ ಪ್ರದರ್ಶನವಾಗಿದೆ.

ಮಹಿಳೆಯರಲ್ಲಿ ಪ್ರಜೂಷಾ ಮಲಿಯಕ್ಕಲ್ 2010ರಲ್ಲಿ ದೆಹಲಿಯಲ್ಲಿ ಬೆಳ್ಳಿ ಗೆದ್ದರೆ, 2002ರಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

14 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago