ಗ್ಲಾಸ್ಕೊ : ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಪೋಲಿಯೊ ಪೀಡಿತ ಝಂದು ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.
ಈ ಮೂಲಕ ಶುಕ್ರವಾರ ಆರಂಭವಾಗಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ಓಪನ್ ಆಗಿದೆ. ಪೋಲಿಯೊ ಪೀಡಿತ ಝಂದು ಕುಮಾರ್ (28) ಅವರು ಮೊದಲ ಪ್ರಯತ್ನದಲ್ಲಿ 181 ಕೆ.ಜಿ, 2ನೇ ಪ್ರಯತ್ನದಲ್ಲಿ 190 ಕೆ.ಜಿ ತೂಕವನ್ನು ಯಶಸ್ವಿಯಾಗಿ ಎತ್ತಿದರು. ಆದ್ರೆ ಮೂರನೇ ಪ್ರಯತ್ನದಲ್ಲಿ 196 ಕೆ.ಜಿ ತೂಕ ಎತ್ತುವಲ್ಲಿ ವಿಫಲರಾದ ಹಿನ್ನೆಲೆ ಒಟ್ಟು 130.9 ಪಾಯಿಂಟ್‌ಗಳೊಂದಿಗೆ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
ನೈಜೀರಿಯಾದ ಇಡ್ರಿಸ್ ರಿಲುವಾನ್ 132.8 ಪಾಯಿಂಟ್‌ಗಳೊಂದಿಗೆ ಚಿನ್ನ, ಬ್ರಿಟನ್‌ನ ಮ್ಯಾಥ್ಯ ಹಾರ್ಡಿಂಗ್ 131 ಪಾಯಿಂಟ್ ಗಳಿಸುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಇದೇ ಸ್ಪರ್ಧೆಯಲ್ಲಿದ್ದ ಭಾರತದ ಮತ್ತೊಬ್ಬ ಕ್ರೀಡಾಪಟು ಸುಧೀರ್ ಅವರು 114.1 ಪಾಯಿಂಟ್‌ಗಳೊಂದಿಗೆ 6ನೇ ಸ್ಥಾನ ಪಡೆದರು.
ಕ್ರೀಡಾಕೂಟದ ಮೊದಲ ದಿನ ಪ್ಯಾರಾ ಪವರ್‌ಲಿಫ್ಟರ್ ಅಶೋಕ್ ಮಲಿಕ್ ಅವರು 4ನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕದಿಂದ ವಂಚಿತರಾದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…