ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವಿಜಯ ಯಾತ್ರೆ ಆರಂಭವಾಗಿದೆ. ಭಾರತದ ಮೊದಲ ಪದಕ ಕರ್ನಾಟಕದ ಉಡುಪಿಗೆ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.
ಈ ಕುರಿತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮೊದಲು ಗುರುರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದ್ರು. ಬಳಿಕ ಇದಕ್ಕಿಂತ ಸಂತೋಷದ ಕ್ಷಣ ನನಗೆ ಬೇರೆ ಇಲ್ಲ. ತಿಂಗಳ ಹಿಂದಷ್ಟೇ ಏಕಲವ್ಯ ಪ್ರಶಸ್ತಿ ನೀಡಲಾಗಿತ್ತು. ಕಾಮನ್ ವೆಲ್ತ್ ಪ್ರಶಸ್ತಿ ಗೆದ್ದ ಗುರುರಾಜ್ ಗೆ ಸರ್ಕಾರದ ಗ್ರೂಪ್ ಬಿ ಉದ್ಯೋಗ ಸಿಗುತ್ತದೆ. ಜೊತೆಗೆ 25 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕ್ರೀಡಾನೀತಿ ಈಗಾಗಲೇ ಘೋಷಣೆ ಮಾಡಲಾಗಿದೆ. ಸರ್ಕಾರದ ನೇಮಕಾತಿಯಲ್ಲಿ ಮೀಸಲಾತಿ ಇದೆ. 48 ಕೋಟಿ ರೂಪಾಯಿ ಈಗಾಗಲೇ ಮೀಸಲಿಟ್ಟು ವಿತರಿಸಲಾಗಿದೆ. ಈಗ ಕಾನೂನಿನ ಅನ್ವಯ ಮೊತ್ತ ಮತ್ತು ಸರ್ಕಾರಿ ಕೆಲಸ ಸಿಗುತ್ತದೆ ಅಂದ್ರು.
ಖೇಲೋ ಇಂಡಿಯಾದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಕ್ರೀಡಾಪಟುಗಳ ಬೆಂಬಲಕ್ಕೆ ಸರ್ಕಾರ ಸಿದ್ಧವಿದೆ. ಒಲಿಂಪಿಕ್ಸ್ ನಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡಬೇಕಿದೆ, ಇದಕ್ಕೆ ಒಂದು ದಿನದ ಪರಿಶ್ರಮ ಸಾಲದು. ನಿರಂತರ ಶ್ರಮಕ್ಕೆ ಅಡಿಗಲ್ಲು ಹಾಕಲಾಗಿದೆ. ಬಡವರ- ಮಧ್ಯಮ ವರ್ಗದ ಕುಟುಂಬದಿಂದ ಬಂದ ಗುರುರಾಜ್ ಪೂಜಾರಿಯಂತವರಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ನುಡಿದ್ರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…