Featured

ಕಾಮನ್ ವೆಲ್ತ್ ಟೆಬಲ್ ಟೆನಿಸ್ : ಎಲ್ಲ 7 ಚಿನ್ನದ ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡ -Vishwanews24

ಕಟಕ್: ಕಟಕ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಟೆಬಲ್ ಟೆನಿಸ್ ಚಾಂಪಿಯನ್ ಶಿಪ್ ನಲ್ಲಿ ಟೂರ್ನಿಯ ಎಲ್ಲ ಏಳೂ ಚಿನ್ನದ ಪದಕಗಳನ್ನು ಗೆದ್ದು ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ.

ಜವಹರ್ ಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಹರ್ಮೀತ್ ದೇಸಾಯಿ ಮತ್ತು ಸಥಿಯಾನ್ ಜ್ಞಾನ ಶೇಖರನ್ ಅವರು ಪುರುಷರ ಸಿಂಗಲ್ಸ್ ಫೈನಲ್ ವಿಭಾಗದಲ್ಲಿ ಗೆದ್ದು ಚಿನ್ನದ ಪದಕಕ್ಕೆ ಮುತ್ತಿಟ್ಟರು. ಅಂತೆಯೇ ಪುರುಷರ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲೂ ಮ್ಯಾಜಿಕ್ ಮಾಡಿದ ಸಥಿಯಾನ್ ಜ್ಞಾನ ಶೇಖರನ್ ಮತ್ತು ಶರತ್ ಕಮಲ್ ಜೋಡಿ ಚಿನ್ನದ ಪದಕಕ್ಕೆ ಭಾಜನರಾದರು.

ಇನ್ನು ಮಹಿಳೆಯರ ವಿಭಾಗದ ಸಿಂಗಲ್ಸ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ ಐಹಿಕಾ ಮುಖರ್ಜಿ ಚಿನ್ನ ಗೆದ್ದರೆ, ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಪೂಜಾ ಸಹಸ್ರಬುದ್ಧೆ ಮತ್ತು ಕೃತ್ವಿಕಾ ಸಿನ್ಹಾ ರಾಯ್ ಅವರು ಚಿನ್ನದ ಪದಕ ಗೆದ್ದರು.

ಆ ಮೂಲಕ ಚಾಂಪಿಯನ್ ಶಿಪ್ ನಲ್ಲಿ ಭಾರತ 7 ಬಂಗಾರ, 5 ಬೆಳ್ಳಿ, 3 ಕಂಚುಗಳನ್ನು ಪಡೆದು ಬೀಗಿದೆ. ಇಂಗ್ಲೆಂಡ್ 2 ಬೆಳ್ಳಿ, 3 ಕಂಚು ಪಡೆದರೆ, ಸಿಂಗಾಪುರ್ 6 ಕಂಚಿನ ಪದಕದ ಸಾಧನೆ ಮಾಡಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago