ಕಾಮುಕರ ಎನ್ ಕೌಂಟರ್ ಮಾಡಿದ ಕನ್ನಡಿಗ – ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ -Vishwanews24

Featured, ರಾಷ್ಟ್ರ ನ್ಯೂಸ್

ಹೈದರಾಬಾದ್: ಹೈದರಾಬಾದ್​ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್​ಕೌಂಟರ್​ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ. ಈ ಎನ್‌ಕೌಂಟರ್‌ ನ ಹಿಂದೆ ಇರುವ ವ್ಯಕ್ತಿ ಕನ್ನಡಿಗರಾದ ಹೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನರ್‌.

ವಿಶ್ವನಾಥ್ ಸಜ್ಜನರ್ ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರು.

ತೆಲಂಗಾಣದ ವಾರಂಗಲ್‌ನಲ್ಲಿ ವಿವಾಹಿತ ಮಹಿಳೆಯ ಮೇಲೆ ಆಟೋ ಚಾಲಕ ಆಸಿಡ್‌ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯ ಎನ್‌ಕೌಂಟರ್‌ ಮಾಡಿದ್ದರು.

ಈ ಅತ್ಯಾಚಾರ ಬೆನ್ನಲ್ಲೇ ಆರೋಪಿಗಳನ್ನು ಬಂಧನ ಮಾಡಿ ಕೋರ್ಟ್‌ಗೆ ಕರೆದೊಯ್ಯುವ ಸಂದರ್ಭದಲ್ಲಿ ಜನರು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ತಕ್ಷಣ ಗಲ್ಲಿಗೇರಿಸಿ ಇಲ್ಲವಾದರೆ ನಮ್ಮ ಕೈಗೆ ಒಪ್ಪಿಸಿ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈಗ ಆರೋಪಿಗಳ ಎನ್‌ಕೌಂಟರ್‌ ನಡೆದ ಹಿನ್ನಲೆಯಲ್ಲಿ ಎನ್‌ಕೌಂಟರ್‌ ನಡೆಸಿದ ತಂಡದ ನೇತೃತ್ವ ವಹಿಸಿದ ವಿಶ್ವನಾಥ್‌ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.