ಕಾಮೆಂಟರಿ ವೇಳೆ ರಿಕಿ ಪಾಂಟಿಂಗ್​ಗೆ ಎದೆನೋವು : ಆಸ್ಪತ್ರೆಗೆ ದಾಖಲು – Vishwanews24

Featured, ರಾಷ್ಟ್ರ ನ್ಯೂಸ್

ಕಾಮೆಂಟರಿ ವೇಳೆ ರಿಕಿ ಪಾಂಟಿಂಗ್​ಗೆ ಎದೆನೋವು : ಆಸ್ಪತ್ರೆಗೆ ದಾಖಲು

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಇಂದು ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದಂತ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿತು.

ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾದ ನಾಯಕ ರಿಕಿ ಪಾಂಟಿಂಗ್ ಅವರು ಅನಾರೋಗ್ಯದ ಕಾರಣ ಮಧ್ಯಾಹ್ನದ ಊಟದ ಸಮಯದಲ್ಲಿ ಪರ್ತ್ ಕ್ರೀಡಾಂಗಣದಿಂದ ನಿರ್ಗಮಿಸಿದರು.

47 ವರ್ಷದ ಅವರು ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾದ ಎರಡು ಟೆಸ್ಟ್ ಪಂದ್ಯಗಳ ತವರಿನ ಸರಣಿಗೆ ಸೆವೆನ್ ನೆಟ್ವರ್ಕ್ನ ಕಾಮೆಂಟರಿ ತಂಡದ ಭಾಗವಾಗಿದ್ದಾರೆ.

ಯುವಕನ ಬೆತ್ತಲೆ ವೀಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ವಂಚಿಸಿದ್ದ ಖತರ್ನಾಕ್‌ ಮಹಿಳೆ ಅರೆಸ್ಟ್‌ – Vishwanews24

 

Leave a Reply