ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ಹಾಕಿದ್ದ ಕನಿಷ್ಠ 25 ಸಿಬ್ಬಂದಿಯನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ವಜಾಗೊಳಿಸಿದೆ.
ಏರ್ಲೈನ್ನ ಸುಮಾರು 300 ಉದ್ಯೋಗಿಗಳು ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದರು. ಫೋನ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇದು ದೊಡ್ಡ ಪ್ರಮಾಣದ ವಿಮಾನಯಾನ ಅಡೆತಡೆಗಳಿಗೆ ಕಾರಣವಾಯಿತು.
ಸಿಬ್ಬಂದಿ ಸಾಮೂಹಿಕ ರಜೆಯಿಂದ 76 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇದರಿಂದ ಸಾಕಷ್ಟು ಸಮಸ್ಯೆಯಾಗಿತ್ತು. ವಜಾಗೊಳ್ಳುವ ಸಿಬ್ಬಂದಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮ್ಯಾನೇಜ್ಮೆಂಟ್ ಇಂದು ಕ್ಯಾಬಿನ್ ಸಿಬ್ಬಂದಿ ಸದಸ್ಯರೊಂದಿಗೆ ಟೌನ್ಹಾಲ್ ಸಭೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
‘ಯಾವುದೇ ಸಮರ್ಥನೀಯ ಕಾರಣವಿಲ್ಲದೆ ರಜೆ ಹಾಕಿರುವುದು ತಿಳಿದುಬಂದಿದೆ’ ಎಂದು 25 ಸಿಬ್ಬಂದಿಯನ್ನು ವಜಾಗೊಳಿಸಿರುವ ಬಗ್ಗೆ ಏರ್ಲೈನ್ ಸ್ಪಷ್ಟನೆ ನೀಡಿದೆ.
ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಗಿತ್ತು. ಇದರಿಂದಾಗಿ ಸಂಪೂರ್ಣ ವೇಳಾಪಟ್ಟಿ ಬದಲಾಯಿತು. ಇದು ಕಂಪನಿಯ ಗೌರವಾನ್ವಿತ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡಿತು. ನಿಮ್ಮ ಕಾರ್ಯವು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಕಂಪನಿಗೆ ತೀವ್ರ ಮುಜುಗರವಾಗಿದ್ದಲ್ಲದೇ ಹಣಕಾಸು ನಷ್ಟ ಕೂಡ ಆಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…