Featured

ಕಾರವಾರ : ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಯುವಕ ಸಾವು – vishwanews24

ಕಾರವಾರ : ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಯುವಕ ಸಾವು

ಕಾರವಾರ: ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38 ವರ್ಷದ ಅಮಿತ್ ಮಾಳಸೇರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ತಮ್ಮ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಮಿತ್ ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ತೀವ್ರ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ತಕ್ಷಣವೇ ಮನೆಯವರು ನೀರು ಕುಡಿಸಲು ಪ್ರಯತ್ನಿಸಿದರೂ, ಅದು ಫಲಕಾರಿಯಾಗದೆ ಅಮಿತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಅವರನ್ನು ಕಾರವಾರದ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರು ಪರೀಕ್ಷಿಸಿದಾಗ ಅಮಿತ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago