ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರ ಕಂಚಿನ ಬಾಗಿಲು ಬಳಿ ನಡೆದಿದೆ.
ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಗುಜರಾತ್‌ನಿಂದ ಉಡುಪಿ ಕಡೆಗೆ ಹೋಗುತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಟ್ಯಾಂಕರ್ ನಲ್ಲಿ ಇದ್ದ ಗ್ಯಾಸ್ ಲೀಕ್ ಆಗಿದೆ.
ಗಂಭೀರ ಗಾಯಗೊಂಡ ಗ್ಯಾಸ್ ಟ್ಯಾಂಕರ್ ಚಾಲಕ ಅರುಣ್ ಶೇಖ್ (57) ನನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಗ್ಯಾಸ್ ಟ್ಯಾಂಕರ್ ನಲ್ಲಿ ಎಥೆನಾಲ್ ಸೋರಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರ ಸಂಚಾರ ಬಂದ್ ಮಾಡಿದ್ದು, ಅಂಕೋಲ ದಿಂದ ಮಾದನಗೇರಿ ಹೆದ್ದಾರಿ ಮೂಲಕ ಮಾರ್ಗ ಬದಲು ಮಾಡಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ NDR ತಂಡ ರವಾನೆ ಮಾಡಲಾಗಿದ್ದು, ಗ್ಯಾಸ್ ಸೋರಿಕೆಯನ್ನ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಘಟನೆ ಸಂಭಂಧ ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…