ಹೊಸದಿಲ್ಲಿ: ಕಾರವಾರ ಹಾಗೂ ಕೊಚ್ಚಿಯಲ್ಲಿರುವ ಭಾರತದ ಮುಂಚೂಣಿ ನೌಕಾ ನೆಲೆಗಳಿಗೆ ಭೇಟಿ ನೀಡುವ ಎರಡು ದಿನಗಳ ಪ್ರವಾಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಆರಂಭಿಸಿದ್ದಾರೆ.
ಕರ್ನಾಟಕದ ಕಾರವಾರದಲ್ಲಿರುವ ಅತ್ಯಂತ ಪ್ರಮುಖ ನೌಕಾನೆಲೆ ವಿಸ್ತರಣೆ ಮಾಡುವ ಚಟುವಟಿಕೆಯನ್ನು ಭಾರತೀಯ ನೌಕಾಪಡೆ ನಡೆಸುತ್ತಿದೆ. ಅದರ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಬಳಿಕ ಏಷ್ಯಾದ ಅತಿದೊಡ್ಡ ನೌಕಾನೆಲೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಕೊಚ್ಚಿಯಲ್ಲಿ ನಡೆಯುತ್ತಿರುವ ಭಾರತದ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಯುದ್ಧ ವಿಮಾನ ವಾಹಕ (ಐಎಸಿ-ಐ) ವಿಕ್ರಾಂತ್ ನಿರ್ಮಾಣ ಪ್ರಗತಿಯನ್ನು ರಾಜನಾಥ್ ಸಿಂಗ್ ಪರಿಶೀಲಿಸಲಿದ್ದಾರೆ. ಈ ವಿಮಾನ ಸಾಗಾಣಿಕೆ ನೌಕೆಯು ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…