Featured

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ – ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ

ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಇನ್ನು ಮುಂದೆ ಖಾಯಂ ಸೇವೆಯನ್ನಾಗಿ ಪರಿವರ್ತಿಸಲು ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಕಾರವಾರ ಭಾಗದ ಸಾರ್ವಜನಿಕರು ಹಾಗೂ ರೈಲ್ವೆ ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಈ ರೈಲು ಸೇವೆಯನ್ನು ಖಾಯಂಗೊಳಿಸುವಂತೆ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು. ಈ ಪ್ರಯತ್ನಕ್ಕೆ ರೈಲ್ವೆ ಇಲಾಖೆಯಿಂದ ಹಸಿರು ನಿಶಾನೆ ಸಿಕ್ಕಿದೆ.

ಹೊಸ ರೈಲು ಸಂಖ್ಯೆ ಮತ್ತು ವೇಳಾಪಟ್ಟಿ ಮಾಹಿತಿ:
ಈ ಹಿಂದೆ ವಿಶೇಷ ರೈಲು ಸಂಖ್ಯೆ 01595/01596 ಆಗಿ ಸಂಚರಿಸುತ್ತಿದ್ದ ಈ ಸೇವೆಯನ್ನು, ಇನ್ನು ಮುಂದೆ ಹೊಸದಾಗಿ ರೈಲು ಸಂಖ್ಯೆ 10109/10110 ಮಡಗಾಂವ್ – ಕಾರವಾರ – ಮಡಗಾಂವ್ ಎಕ್ಸ್‌ಪ್ರೆಸ್ ಹೆಸರಿನಲ್ಲಿ ಪ್ರತಿದಿನ ನಿಯಮಿತವಾಗಿ ಓಡಿಸಲಾಗುತ್ತದೆ.

ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ಹಚ್ಚೆ ವಿನ್ಯಾಸವನ್ನು ಆರಿಸಲು ಮುಂದಾಗಬೇಡಿ, ಬೇಡ, ಕಲಾವಿದನು ಶಾಯಿಯ ಕೊನೆಯ ಹನಿ ಸೇರಿಸಿದ ಕೂಡಲೇ ನಿಮ್ಮ ನಿರ್ಧಾರಕ್ಕೆ ನೀವು ವಿಷಾದಿಸಬಹುದು, ಹಚ್ಚಿ ಪಡೆಯುವ ಮೊದಲು ನೀವು ಸಾಕಷ್ಟು ಸಂಶೋಧನೆ ಮಾಡಬೇಕು.

ರೈಲು ಸಂಖ್ಯೆ 10110 (ಕಾರವಾರ – ಮಡಗಾಂವ್ ಎಕ್ಸ್‌ಪ್ರೆಸ್): ಪ್ರತಿದಿನ ಬೆಳಿಗ್ಗೆ 08:30 ಕ್ಕೆ ಕಾರವಾರದಿಂದ ಹೊರಟು, ಅದೇ ದಿನ ಬೆಳಿಗ್ಗೆ 09:45 ಕ್ಕೆ
ಮಡಗಾಂವ್ ತಲುಪಲಿದೆ.

ರೈಲು ಸಂಖ್ಯೆ 10109 (ಮಡಗಾಂವ್ – ಕಾರವಾರ ಎಕ್ಸ್‌ಪ್ರೆಸ್): ಪ್ರತಿದಿನ ಸಂಜೆ 04:30 ಕ್ಕೆ ಮಡಗಾಂವ್‌ನಿಂದ ಹೊರಟು, ಸಂಜೆ 05:45 ಕ್ಕೆ ಕಾರವಾರವನ್ನು ತಲುಪಲಿದೆ.

ಕಾಣಕೋಣ ನಿಲ್ದಾಣದಲ್ಲಿ ವಾಣಿಜ್ಯ ನಿಲುಗಡೆ: ಉಭಯ ರಾಜ್ಯಗಳ ಗಡಿ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ಈ ರೈಲಿಗೆ ಗೋವಾದ ಪ್ರಮುಖ ಪ್ರವಾಸಿ ತಾಣವಾದ ಕಾಣಕೋಣ (Canacona) ನಿಲ್ದಾಣದಲ್ಲಿ ವಾಣಿಜ್ಯ ನಿಲುಗಡೆಯನ್ನು ಕಲ್ಪಿಸಲಾಗಿದೆ.

ಒಟ್ಟು 14 ಬೋಗಿಗಳು: ಯಾರಿಗೆಲ್ಲ ಅನುಕೂಲ?
ಈ ಎಕ್ಸ್‌ಪ್ರೆಸ್ ರೈಲು ಎಸಿ (AC), ಸ್ಲಿಪರ್ (Sleeper) ಮತ್ತು ಸಾಮಾನ್ಯ ದರ್ಜೆಯ (General) ಬೋಗಿಗಳನ್ನು ಒಳಗೊಂಡ ಒಟ್ಟು 14 ಬೋಗಿಗಳೊಂದಿಗೆ ಸಂಚರಿಸಲಿದೆ. ಈ ಭಾಗದ ಜನಸಾಮಾನ್ಯರಿಗೆ, ಉದ್ಯೋಗಿಗಳಿಗೆ, ಪ್ರವಾಸಿಗರಿಗೆ ಹಾಗೂ ಆರೋಗ್ಯ ಸೇವೆಗಾಗಿ ಗೋವಾಕ್ಕೆ ತೆರಳುವ ರೋಗಿಗಳಿಗೆ ಅತ್ಯಂತ ಉಪಯುಕ್ತವಾಗಲಿರುವ ಈ ಖಾಯಂ ರೈಲು ಸೇವೆಯ ಸೌಲಭ್ಯವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಜೂನ್ 11 ಕ್ಕೆ ವಿ. ಸೋಮಣ್ಣ ಅವರಿಂದ ಚಾಲನೆ
ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಜೂನ್ 11ರಂದು ಗೋವಾದ ಮಡಗಾಂವ್ ನಿಲ್ದಾಣದಿಂದ ಈ ರೈಲಿನ ನಿಯಮಿತ (ಖಾಯಂ) ಸೇವೆಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಈ ಪ್ರಮುಖ ರೈಲ್ವೆ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಪ್ರಕಟಣೆಯಲ್ಲಿ ವಿಶೇಷ ಧನ್ಯವಾದ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

5 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

6 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

8 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

8 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

8 hours ago

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ – vishwanews24

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ…

8 hours ago