ಕಾರವಾರ: ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಕಾರ್ಮಿಕನ ಮೇಲೆ ಹಾದು ಹೋಗಿ ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್‌ನಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ಹಾವೇರಿ ಮೂಲದ ಹನುಮಂತ್ ವಡ್ಡರ್ (27) ಎಂದು ಗುರುತಿಸಲಾಗಿದ್ದು, ಮುಂದಿನ ತಿಂಗಳು ಕಾರ್ಮಿಕನ ಮದುವೆ ಕೂಡ ನಿಶ್ಚಯವಾಗಿತ್ತು. ಕಾರವಾರದ ಬೈತಕೋಲ್‌ನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕೊಪ್ಪಳದ ಐದು ಜನ ಸ್ನೇಹಿತರೊಂದಿಗೆ ಕೆಲಸ ಮುಗಿಸಿ ಬಂದರಿನಲ್ಲಿ ಮಲಗಿದ್ದ.
ಗುರುವಾರ ಮುಂಜಾನೆ ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಹೊರಡುವ ಸಮಯದಲ್ಲಿ ಚಾಲಕ ಈ ಕಾರ್ಮಿಕನನ್ನು ಮಲಗಿರುವುದನ್ನು ನೋಡದೇ ವಾಹನ ಚಲಾಯಿಸಿದ್ದು, ಈತನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಟ್ಟಿದ್ದಾನೆ.
ಸದ್ಯ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…