ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ.
ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು.
ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ.
ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲೆ, ಬಂಟ್ವಾಳ ತಾಲೂಕು, ಕಾವಳಮುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕ ಮತ್ತು ಕಲ್ಲುಪುಡಿ (ಕುವ ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ. ಎಂಬ ಅದೇಶ ಹೊರಡಿಸಿದೆ.
ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು.
ಗಣಿಗಾರಿಕೆ ಯನ್ನು ನಿಲ್ಲಿಸಲು ಪ್ರತಿಭಟನೆ , ಸಹಿತ ಅನೇಕಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ.
ಈ ಬಗ್ಗೆ ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು.
ಇದೀಗ ಸರಕಾರದ ಅದೇಶ ಹೊರಡಿಸಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…