ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ.
ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಮೃತಪಟ್ಟವರು.
ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ. ಅದೇ ರೀತಿ ಇಂದು (ಜೂ.7ರ ಶನಿವಾರ) ಸ್ನೇಹಿತ ಪ್ರಶ್ವಿತ್ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಚೇತನ್ ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದಾನೆ.
ಜೊತೆಯಲ್ಲಿದ್ದ ಗೆಳೆಯ ಪ್ರಶ್ವಿತ್ ಗೆ ಈಜು ಬರದ ಕಾರಣ ಆತ ಬೊಬ್ಬೆ ಹೊಡೆದು ಸ್ಥಳೀಯರನ್ನು ಕರೆದಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಮಾಂಗಾಜೆ ಅವರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆತ್ತಿ ಹಾಕಿದ್ದಾರೆ. ಆದರೆ ಅದಾಗಲೇ ಚೇತನ್ ಮೃತಪಟ್ಟಿದ್ದರು.
ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…