ಬೆಂಗಳೂರು: ಕಾರಿಗೆ ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ.
ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಬುಧವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಜಿಕೆವಿಕೆ ಬಳಿ ಬೈಕ್‍ನಲ್ಲಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಆತನ ಬೈಕ್ ಕಾರೊಂದಕ್ಕೆ ತಾಗಿದೆ. ಈ ವೇಳೆ ಕಾರಿನಲ್ಲಿದ್ದ ಅರವಿಂದ್ ಹಾಗೂ ಕೇಶವ್ ಎಂಬವರು ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಹತ್ಯೆಗೆ ಕಾರಣವಾಗಿದೆ.
ಗಲಾಟೆ ಬಳಿಕ ಮಹೆಶ್ ಬೈಕ್‍ನಲ್ಲಿ ಹೋಗುವಾಗ ಕಾರಿನಲ್ಲಿ ಕಿಲೋಮೀಟರ್‌ಗಟ್ಟಲೆ ಚೇಸ್ ಮಾಡಿ ಆರೋಪಿಗಳು ಬೈಕ್‍ಗೆ ಹಿಂದಿನಿಂದ ಅಪಘಾತವೆಸಗಿದ್ದಾರೆ. ಪರಿಣಾಮ ಬೈಕ್‍ನಲ್ಲಿದ್ದ ಮಹೇಶ್ ತಲೆ ರಸ್ತೆಯಲ್ಲಿದ್ದ ಪೋಲ್ ಹಾಗೂ ಗೋಡೆಗೆ ಬಡಿದಿದೆ. ಹೆಲ್ಮೆಟ್ ಹಾಕಿರದ ಕಾರಣ ಮೆದಳು ಹೊರಗಡೆ ಬಂದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.
ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಅರವಿಂದ್ ಹಾಗೂ ಕೇಶವ್‍ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…