Featured

ಕಾರಿಗೆ  ಬೈಕ್ ತಾಗಿದ್ದಕ್ಕೆ ಅಪಘಾತವೆಸಗಿ ಯುವಕನ ಹತ್ಯೆ : ದುಷ್ಕರ್ಮಿಗಳು ಅರೆಸ್ಟ್ – vishwanews24

ಕಾರಿಗೆ  ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ದುಷ್ಕರ್ಮಿಗಳು ಅರೆಸ್ಟ್

ಬೆಂಗಳೂರು: ಕಾರಿಗೆ  ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್  ಆಗಿ ಕೆಲಸ ಮಾಡಿಕೊಂಡಿದ್ದ. ಬುಧವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಜಿಕೆವಿಕೆ ಬಳಿ ಬೈಕ್‍ನಲ್ಲಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಆತನ ಬೈಕ್ ಕಾರೊಂದಕ್ಕೆ ತಾಗಿದೆ. ಈ ವೇಳೆ ಕಾರಿನಲ್ಲಿದ್ದ ಅರವಿಂದ್ ಹಾಗೂ ಕೇಶವ್ ಎಂಬವರು ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಹತ್ಯೆಗೆ ಕಾರಣವಾಗಿದೆ.

ಗಲಾಟೆ ಬಳಿಕ ಮಹೆಶ್ ಬೈಕ್‍ನಲ್ಲಿ ಹೋಗುವಾಗ ಕಾರಿನಲ್ಲಿ ಕಿಲೋಮೀಟರ್‌ಗಟ್ಟಲೆ ಚೇಸ್ ಮಾಡಿ ಆರೋಪಿಗಳು ಬೈಕ್‍ಗೆ ಹಿಂದಿನಿಂದ ಅಪಘಾತವೆಸಗಿದ್ದಾರೆ. ಪರಿಣಾಮ ಬೈಕ್‍ನಲ್ಲಿದ್ದ ಮಹೇಶ್ ತಲೆ ರಸ್ತೆಯಲ್ಲಿದ್ದ ಪೋಲ್ ಹಾಗೂ ಗೋಡೆಗೆ ಬಡಿದಿದೆ. ಹೆಲ್ಮೆಟ್ ಹಾಕಿರದ ಕಾರಣ ಮೆದಳು ಹೊರಗಡೆ ಬಂದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.

ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಅರವಿಂದ್ ಹಾಗೂ ಕೇಶವ್‍ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

6 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

6 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

9 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago