ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ ಕಾಣುತ್ತಿದೆ. ಏತನ್ಮಧ್ಯೆ ”ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗಲೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು” ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಒಬ್ಬರೇ ವಾಹನ ಚಲಾಯಿಸುವಾಗ ಮಾಸ್ಕ್ ಧರಿಸಿಲ್ಲವೆಂದು ದಂಡ ಹಾಕಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪ್ರತಿಭಾ ಎಂ ಸಿಂಗ್ ಅವರು, ಈ ತೀರ್ಪನ್ನು ಪ್ರಕಟಿಸಿದರು.
”ಒಬ್ಬ ವ್ಯಕ್ತಿಯು ಕಾರಿನಲ್ಲಿ ಏಕಾಂಗಿಯಾಗಿ ವಾಹನ ಚಲಾಯಿಸುತ್ತಿದ್ದರೂ ಮಾಸ್ಕ್ ಕಡ್ಡಾಯ” ಎಂದು ಹೇಳಿರುವ ದೆಹಲಿ ಹೈಕೋರ್ಟ್, ಯಾವುದೇ ವಾಹನವೂ ಕೊರೊನಾ ನಿಯಮಕ್ಕೆ ಒಳಪಡುವ “ಸಾರ್ವಜನಿಕ ಸ್ಥಳ” ಎಂದು ಸಂಬೋಧಿಸಿದೆ. ಹಾಗೆಯೇ ಮಾಸ್ಕ್ ಧರಿಸುವುದು ಆ ವ್ಯಕ್ತಿಗೆ ಹಾಗೂ ಸುತ್ತಮುತ್ತಲಿನವರಿಗೆ “ಸುರಕ್ಷಾ ಕವಚ” ಎಂದು ನ್ಯಾಯಾಲಯ ಹೇಳಿದೆ.
ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್ ಅಂಬಾನಿ -Vishwanews24
“ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ, ಮಾಸ್ಕ್ ಧರಿಸಲು ಏಕೆ ಆಕ್ಷೇಪಿಸುತ್ತೀರಿ? ಇದು ನಿಮ್ಮ ಸ್ವಂತ ಸುರಕ್ಷತೆಗಾಗಿ. ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ಒಬ್ಬ ವ್ಯಕ್ತಿಗೆ ಲಸಿಕೆ ನೀಡಲಾಗಿದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ ಎಲ್ಲರೂ ಮಾಸ್ಕ್ ಧರಿಸಬೇಕು” ಎಂದು ಕೋರ್ಟ್ ಹೇಳಿದೆ.
“ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ನಿಂತಾಗ, ಚಾಲಕರು ಆಗಾಗ್ಗೆ ಕಿಟಕಿಯಿಂದ ಹೊರ ತಲೆಹಾಕಿ ನೋಡುತ್ತಾರೆ. ಕೊರೊನಾ ಎಷ್ಟು ಸಾಂಕ್ರಾಮಿಕವಾಗಿದೆ ಎಂದರೆ ಆ ಸಮಯದಲ್ಲಿಯೂ ಯಾರಾದರೂ ಸೋಂಕಿಗೆ ಒಳಗಾಗಬಹುದು” ಎಂದು ಕೋರ್ಟ್ ಅಭಿಪ್ರಾಯಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕು ತೀವ್ರಗತಿಲ್ಲಿ ಹರಡುತ್ತಿದೆ. ದೆಹಲಿಯಲ್ಲಿ ಒಂದೇ ದಿನ 5,100 ಕೊರೊನಾ ಪ್ರಕರಣಗಳು ದೃಢವಾದ ಒಂದು ದಿನದ ನಂತರ ನ್ಯಾಯಾಲಯ ಈ ಆದೇಶ ನೀಡಿದೆ. ಭಾರತದಲ್ಲಿ ಪ್ರಸ್ತುತ 1 ಕೋಟಿ 28 ಲಕ್ಷಕ್ಕೂ ಅಧಿಕ ಮಂದಿ ಸೋಂಕಿಗೆ ಒಳಗಾಗಿದ್ದಾರೆ. 1,66,177 ಮಂದಿ ಸಾವನ್ನಪ್ಪಿದ್ದಾರೆ.
ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಬಿಗ್ ಶಾಕ್ ವೇತನ ತಡೆಗೆ ಮುಂದಾದ ಸರ್ಕಾರ ! Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…