Featured

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗಲೂ ಮಾಸ್ಕ್‌ ಕಡ್ಡಾಯ : ದೆಹಲಿ ಹೈಕೋರ್ಟ್ -Vishwanews24

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗಲೂ ಮಾಸ್ಕ್‌ ಕಡ್ಡಾಯ : ದೆಹಲಿ ಹೈಕೋರ್ಟ್ -Vishwanews24

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ ಕಾಣುತ್ತಿದೆ. ಏತನ್ಮಧ್ಯೆ ”ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗಲೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು” ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಒಬ್ಬರೇ ವಾಹನ ಚಲಾಯಿಸುವಾಗ ಮಾಸ್ಕ್‌ ಧರಿಸಿಲ್ಲವೆಂದು ದಂಡ ಹಾಕಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪ್ರತಿಭಾ ಎಂ ಸಿಂಗ್ ಅವರು, ಈ ತೀರ್ಪನ್ನು ಪ್ರಕಟಿಸಿದರು.

”ಒಬ್ಬ ವ್ಯಕ್ತಿಯು ಕಾರಿನಲ್ಲಿ ಏಕಾಂಗಿಯಾಗಿ ವಾಹನ ಚಲಾಯಿಸುತ್ತಿದ್ದರೂ ಮಾಸ್ಕ್‌ ಕಡ್ಡಾಯ” ಎಂದು ಹೇಳಿರುವ ದೆಹಲಿ ಹೈಕೋರ್ಟ್, ಯಾವುದೇ ವಾಹನವೂ ಕೊರೊನಾ ನಿಯಮಕ್ಕೆ ಒಳಪಡುವ “ಸಾರ್ವಜನಿಕ ಸ್ಥಳ” ಎಂದು ಸಂಬೋಧಿಸಿದೆ. ಹಾಗೆಯೇ ಮಾಸ್ಕ್‌ ಧರಿಸುವುದು ಆ ವ್ಯಕ್ತಿಗೆ ಹಾಗೂ ಸುತ್ತಮುತ್ತಲಿನವರಿಗೆ “ಸುರಕ್ಷಾ ಕವಚ” ಎಂದು ನ್ಯಾಯಾಲಯ ಹೇಳಿದೆ.

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್‌ ಅಂಬಾನಿ -Vishwanews24

“ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ, ಮಾಸ್ಕ್‌ ಧರಿಸಲು ಏಕೆ ಆಕ್ಷೇಪಿಸುತ್ತೀರಿ? ಇದು ನಿಮ್ಮ ಸ್ವಂತ ಸುರಕ್ಷತೆಗಾಗಿ. ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ಒಬ್ಬ ವ್ಯಕ್ತಿಗೆ ಲಸಿಕೆ ನೀಡಲಾಗಿದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ ಎಲ್ಲರೂ ಮಾಸ್ಕ್‌ ಧರಿಸಬೇಕು” ಎಂದು ಕೋರ್ಟ್ ಹೇಳಿದೆ.

“ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ನಿಂತಾಗ, ಚಾಲಕರು ಆಗಾಗ್ಗೆ ಕಿಟಕಿಯಿಂದ ಹೊರ ತಲೆಹಾಕಿ ನೋಡುತ್ತಾರೆ. ಕೊರೊನಾ ಎಷ್ಟು ಸಾಂಕ್ರಾಮಿಕವಾಗಿದೆ ಎಂದರೆ ಆ ಸಮಯದಲ್ಲಿಯೂ ಯಾರಾದರೂ ಸೋಂಕಿಗೆ ಒಳಗಾಗಬಹುದು” ಎಂದು ಕೋರ್ಟ್ ಅಭಿಪ್ರಾಯಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕು ತೀವ್ರಗತಿಲ್ಲಿ ಹರಡುತ್ತಿದೆ. ದೆಹಲಿಯಲ್ಲಿ ಒಂದೇ ದಿನ 5,100 ಕೊರೊನಾ ಪ್ರಕರಣಗಳು ದೃಢವಾದ ಒಂದು ದಿನದ ನಂತರ ನ್ಯಾಯಾಲಯ ಈ ಆದೇಶ ನೀಡಿದೆ. ಭಾರತದಲ್ಲಿ ಪ್ರಸ್ತುತ 1 ಕೋಟಿ 28 ಲಕ್ಷಕ್ಕೂ ಅಧಿಕ ಮಂದಿ ಸೋಂಕಿಗೆ ಒಳಗಾಗಿದ್ದಾರೆ. 1,66,177 ಮಂದಿ ಸಾವನ್ನಪ್ಪಿದ್ದಾರೆ.

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಬಿಗ್ ಶಾಕ್ ವೇತನ ತಡೆಗೆ ಮುಂದಾದ ಸರ್ಕಾರ ! Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago