ಕಾರಿನ ಟೈರ್ ಬ್ಲಾಸ್ಟ್ : ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅದೃಷ್ಟವಶಾತ್ ಪಾರು – Vishwanews24

Featured, ರಾಜ್ಯ ನ್ಯೂಸ್

ಕಾರಿನ ಟೈರ್ ಬ್ಲಾಸ್ಟ್ : ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅದೃಷ್ಟವಶಾತ್ ಪಾರು

ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ  ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ  ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಕಸ್ಮಿಕವಾಗಿ ಶಾಸಕರ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಕಾರು ರಸ್ತೆಯ ಬದಿಗೆ ನುಗ್ಗಿ, ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.

ನೇಹಾ ಹಿರೇಮಠ ಕೊಲೆ ಪ್ರಕರಣ : ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ : ಸಿಎಂ – Vishwanews24

ರಾತ್ರಿ 11:50ರ ಸಮಯವಾದ್ದರಿಂದ ಆ ಸಮಯದಲ್ಲಿ ಬೇರೆ ವಾಹನಗಳ ಓಡಾಟ ಕಡಿಮೆಯಾಗಿದ್ದು, ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply