ನಟಿ ರವೀನಾ ಟಂಡನ್ ಕಾರು ಅಪಘಾತದ ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ನಟಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಸಲಿ ಸಂಗತಿ ಈಗ ತಿಳಿದು ಬಂದಿದೆ. ನಟಿಯ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಬಗ್ಗೆ ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷನೆ ನೀಡಿದ್ದಾರೆ.
ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಕ್ಲ್ಯಾರಿಟಿ ನೀಡಿದ್ದಾರೆ.
ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗಿತ್ತು. ಆದರೆ ಕಾರು ಯಾರಿಗೂ ಟಚ್ ಮಾಡಿಲ್ಲ. ಆದರೂ ಅಲ್ಲಿ ಮಾತಿನ ಚಕಮಕಿ ನಡೆದು ಈ ಘಟನೆ ವಿವಾದ ಸೃಷ್ಟಿಸಿದೆ. ಘಟನೆಯ ವೇಳೆ, ನಟಿ ಕಾರಿನಿಂದ ಹೊರಬಂದಿದ್ದು, ಜಗಳವಾಡಲು ಅಲ್ಲ. ಬದಲಾಗಿ ತನ್ನ ಚಾಲಕನನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಲಿಲ್ಲ ಎಂದು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸಾಬೀತಾಗಿದೆ. ಇದೆಲ್ಲಾ ಸುಳ್ಳು ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…