Featured

ಕಾರು ಅಪಘಾತ: ನಟಿ ರವೀನಾ ಟಂಡನ್​ ವಿರುದ್ದ ಸುಳ್ಳು ದೂರು ದಾಖಲು: ಮುಂಬೈ ಡಿಸಿಪಿ ಸ್ಪಷ್ಟನೆ – vishwanews24

ಕಾರು ಅಪಘಾತ: ನಟಿ ರವೀನಾ ಟಂಡನ್​ ವಿರುದ್ದ ಸುಳ್ಳು ದೂರು ದಾಖಲು: ಮುಂಬೈ ಡಿಸಿಪಿ ಸ್ಪಷ್ಟನೆ

ನಟಿ ರವೀನಾ ಟಂಡನ್  ಕಾರು ಅಪಘಾತದ  ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ನಟಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಸಲಿ ಸಂಗತಿ ಈಗ ತಿಳಿದು ಬಂದಿದೆ. ನಟಿಯ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಬಗ್ಗೆ ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷನೆ ನೀಡಿದ್ದಾರೆ.

ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಕ್ಲ್ಯಾರಿಟಿ ನೀಡಿದ್ದಾರೆ.

ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗಿತ್ತು. ಆದರೆ ಕಾರು ಯಾರಿಗೂ ಟಚ್ ಮಾಡಿಲ್ಲ. ಆದರೂ ಅಲ್ಲಿ ಮಾತಿನ ಚಕಮಕಿ ನಡೆದು ಈ ಘಟನೆ ವಿವಾದ ಸೃಷ್ಟಿಸಿದೆ. ಘಟನೆಯ ವೇಳೆ, ನಟಿ ಕಾರಿನಿಂದ ಹೊರಬಂದಿದ್ದು, ಜಗಳವಾಡಲು ಅಲ್ಲ. ಬದಲಾಗಿ ತನ್ನ ಚಾಲಕನನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಲಿಲ್ಲ ಎಂದು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸಾಬೀತಾಗಿದೆ. ಇದೆಲ್ಲಾ ಸುಳ್ಳು ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.

 

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

5 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago