Featured

ಕಾರು ಮತ್ತು ಲಾರಿ ನಡುವೆ  ಭೀಕರ ಅಪಘಾತ :: ಒಂದೇ ಕುಟುಂಬದ ಐವರು ಮೃತ್ಯು – Vishwanews24

ಕಾರು ಮತ್ತು ಲಾರಿ ನಡುವೆ  ಭೀಕರ ಅಪಘಾತ :: ಒಂದೇ ಕುಟುಂಬದ ಐವರು ಮೃತ್ಯು

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕಾಸರಗೋಡು ನಿವಾಸಿಗಳಾದ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ ಹಾಗೂ 10 ವರ್ಷದ ಬಾಲಕ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾರಿಕಲ್ ಭೀಮನಡಿ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮನಡಿ ಚೂರಿಕ್ಕಾಡ್ ನಿವಾಸಿ ಸುಧಾಕರನ್(52), ಸುಧಾಕರನ್ ಅವರ ಪತ್ನಿ ಅಜಿತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಪುತ್ರ ಆಕಾಶ್ (9) ಮೃತಪಟ್ಟವರು ಎಂದು ತಿಳಿದುಬಂದಿದೆ.

ಕಣ್ಣೂರು ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ಮತ್ತು ಕಣ್ಣೂರು ಕಡೆಗೆ ತೆರಳುತ್ತಿದ್ದ ಅಡುಗೆ ಅನಿಲ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ನಡೆದಿದೆ.

ಕೋಝಿಕ್ಕೋ ಡ್ ನಿಂದ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೊಲೀಸರು ಹೊರ ತೆಗೆದರು ಎಂದು ತಿಳಿದು ಬಂದಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

16 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago